ಗುರುವಾರ , ಆಗಸ್ಟ್ 5, 2021
26 °C

ನಂಜಾವಧೂತ ಸ್ವಾಮೀಜಿಗೆ ಪಿತೃ ವಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಟ್ಟನಾಯಕನಹಳ್ಳಿ: ಇಲ್ಲಿನ ಗುರುಗುಂಡಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಪೂರ್ವಾಶ್ರಮದ ತಂದೆ ಕೃಷ್ಣಯ್ಯ (80) ಶುಕ್ರವಾರ ಚಿತ್ರದುರ್ಗದ ತಮ್ಮ ನಿವಾಸದಲ್ಲಿ ನಿಧನರಾದರು. ಸ್ವಾಮೀಜಿ ಸೇರಿದಂತೆ ಇಬ್ಬರು ಗಂಡು ಮಕ್ಕಳು ಮತ್ತು ನಾಲ್ಕು ಮಂದಿ ಹೆಣ್ಣು ಮಕ್ಕಳು ಇವರಿಗೆ ಇದ್ದಾರೆ. 

ಸ್ವಗ್ರಾಮ ಶಿರಾ ತಾಲ್ಲೂಕಿನ ಯಾದಲಡಕುನಲ್ಲಿ ಅಂತ್ಯಕ್ರಿಯೆ ನೆರವೇರಿತು. ಶಿರಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಆರಂಭಿಸಿದ ಕೃಷ್ಣಯ್ಯ, ಚಳ್ಳಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿಯೂ ಕೆಲಸ ಮಾಡಿದರು. ಚಿತ್ರದುರ್ಗ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಅವರು 2003ರಲ್ಲಿ ನಿವೃತ್ತರಾದರು. ಚಿತ್ರದುರ್ಗದಲ್ಲಿಯೇ ನೆಲೆಸಿದರು.

ಕೃಷ್ಣಯ್ಯ ಅವರ ಕುಟುಂಬ ಅವಧೂತ ಪರಂಪರೆಯದ್ದು. ಅವರ ಅಣ್ಣ ಸಹ ಗುರುಗುಂಡಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾಗಿದ್ದರು. ಇವರ ನಂತರ ತಮ್ಮ ಕಿರಿಯ ಪುತ್ರನಿಗೆ ದೀಕ್ಷೆ ಕೊಡಿಸಿ ನಂಜಾವಧೂತ ಸ್ವಾಮೀಜಿ ಅವರನ್ನು ಪೀಠಾಧ್ಯಕ್ಷರನ್ನಾಗಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು