ತಾರತಮ್ಯ ಮನೋಭಾವ ಇದ್ದರೆ ಸುವರ್ಣಸೌಧ ಕಟ್ಟುತ್ತಿರಲಿಲ್ಲ; ನಂಜಾವಧೂತ ಸ್ವಾಮೀಜಿ

7

ತಾರತಮ್ಯ ಮನೋಭಾವ ಇದ್ದರೆ ಸುವರ್ಣಸೌಧ ಕಟ್ಟುತ್ತಿರಲಿಲ್ಲ; ನಂಜಾವಧೂತ ಸ್ವಾಮೀಜಿ

Published:
Updated:

ತುಮಕೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕದ ಬಗ್ಗೆ ತಾರತಮ್ಯ ಭಾವನೆ ಹೊಂದಿಲ್ಲ. ಆ ಮನೋಭಾವ ಇದ್ದಿದ್ದರೆ ಸುವರ್ಣ ಸೌಧವನ್ನು ಬೆಳಗಾವಿಯಲ್ಲಿ ಕಟ್ಟುತ್ತಿರಲಿಲ್ಲ ಎಂದು ನಂಜಾವಧೂತ ಸ್ಚಾಮೀಜಿ ಹೇಳಿದರು.

ಭಾನುವಾರ ನಗರದ ಕೊಲ್ಲಾಪುರದಮ್ಮ ಸಮುದಾಯಭವನದಲ್ಲಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘವು ಅಯೋಜಿಸಿದ್ಧ ಕೆಂಪೇಗೌಡ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುಮಾರ ಸ್ವಾಮಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಲು ಹೊರಟಿದ್ದಾರೆ ಎಂಬ ಟೀಕೆ ಸರಿಯಲ್ಲ ಎಂದರು.

ಎಚ್.ಡಿ.ದೇವೇಗೌಡರು, ಎಸ್.ಎಂ.ಕೃಷ್ಣ, ಡಿ.ವಿ.ಸದಾನಂದಗೌಡ, ಕುಮಾರಸ್ವಾಮಿ ಹೀಗೆ ದಕ್ಷಿಣ ಕರ್ನಾಟಕ ಭಾಗದವರೇ ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ವಿಶೇಷವಾಗಿ ದೇವೇಗೌಡರು ಆ ಭಾಗಕ್ಕೆ ನೀರಾವರಿ ಕ್ಷೇತ್ರ ಅಭಿವೃದ್ಧಿಪಡಿಸುವಲ್ಲಿ ಮಾಡಿದ ಪ್ರಯತ್ನ ಯಾರೂ ಮಾಡಿಲ್ಲ ಎಂದು ಹೇಳಿದರು.

ಹಾಗೆ ನೋಡಿದರೆ ನಮ್ಮ ದಕ್ಷಿಣ ಭಾಗದ ಜಿಲ್ಲೆಗಳೇ ಅಭಿವೃದ್ಸಿಯಲ್ಲಿ ಹಿಂದೆ ಇವೆ. ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರುನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಅಭಿವೃದ್ಧಿ ಅಗಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರವು ರಾಜ್ಯದ ರೈತರಿಗೆ 10 ಸಾವಿರ ಕೋಟಿ ಪರಿಹಾರ ಮೊತ್ತ ನೀಡಿದರೆ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು 42 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದಾರೆ ಎಂದು ಹೇಳಿದರು.

ಒಕ್ಕಲಿಗರ ಸಮುದಾಯ ಶೈಕ್ಷಣಿಕವಾಗಿ ಮುನ್ನಡೆ ಸಾಧಿಸಬೇಕು. ಸಮಾಜ ಸಂಘಟನೆಯಲ್ಲಿ ಒಗ್ಗಟ್ಟು ಮೆರೆಯಬೇಕು. ಪ್ರತಿಭಾನ್ವಿತ ಮಕ್ಕಳ ಏಳ್ಗೆಗೆ ಪ್ರೋತ್ಸಾಹಿಸಬೇಕು ಎಂದರು.

ಸಣ್ಣಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ ಮಾತನಾಡಿ, ' ಒಕ್ಕಲಿಗ ಸಮಾಜ ಇನ್ನಷ್ಟು ಸಂಘಟನೆಯಾಗಬೇಕು. ಪೋಷಕರು ಮಕ್ಕಳಿಗೆ ಶಿಕ್ಷಣ ಕಲ್ಪಿಸಬೇಕು. ಶಿಕ್ಷಣದಿಂದ ಮಾತ್ರ ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು.

ಮಂಗಳನಾಥ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಶಾಸಕರಾದ ಡಿ.ಸಿ.ಗೌರಿಶಂಕರ್, ಮಸಾಲಾ ಜಯರಾಮ್, ಮಾಜಿ ಶಾಸಕ ಎಚ್.ನಿಂಗಪ್ಪ ಹಾಗೂ ಸಮಾಜದ ಮುಖಂಡರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !