ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈ ಹಿಡಿದ ನರಸೇಗೌಡ, ದೀಪಕ್‌ಗೌಡ

Published 18 ಏಪ್ರಿಲ್ 2024, 16:15 IST
Last Updated 18 ಏಪ್ರಿಲ್ 2024, 16:15 IST
ಅಕ್ಷರ ಗಾತ್ರ

ತುಮಕೂರು: ಬಿಜೆಪಿ ಮುಖಂಡ ನಗರದ ನರಸೇಗೌಡ, ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಮುಖಂಡ ದೀಪ್‌ಗೌಡ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.

ನಗರ ಜೆಡಿಎಸ್ ಘಟಕದ ಅಧ್ಯಕ್ಷರಾಗಿ ಪಕ್ಷ ಕಟ್ಟಿ ಬೆಳೆಸಿದ್ದ ನರಸೇಗೌಡ ಅವರು ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ನಗರ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಬಯಸಿದ್ದರು. ಜೆಡಿಎಸ್‌ನಿಂದ ಟಿಕೆಟ್ ಸಿಗದೆ ಬಂಡಾಯವಾಗಿ ಕಣಕ್ಕಿಳಿದಿದ್ದರು. ಕೊನೆ ಗಳಿಗೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದು ಬಿಜೆಪಿ ಅಭ್ಯರ್ಥಿಯಾಗಿದ್ದ ಜಿ.ಬಿ.ಜ್ಯೋತಿಗಣೇಶ್ ಅವರನ್ನು ಬೆಂಬಲಿಸಿದ್ದರು. ನಂತರ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಈಗ ಆ ಪಕ್ಷವನ್ನೂ ತೊರೆದು ಕಾಂಗ್ರೆಸ್ ಸೇರಿದ್ದಾರೆ.

‘ಬಿಜೆಪಿ ನೀಡಿದ್ದ ಒಂದು ಭರವಸೆಯನ್ನು ಈಡೇರಿಸಿಲ್ಲ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ದುಬಾರಿಯಾಗಿದೆ. ಬೆಲೆ ಏರಿಕೆಯಿಂದ ದೇಶದ ಜನತೆ ತತ್ತರಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಸ್.ಪಿ.ಮುದ್ದಹನುಮೇಗೌಡ ಸ್ಥಳೀಯರಾಗಿದ್ದು, ಅವರನ್ನು ಬೆಂಬಲಿಸಬೇಕೆಂಬ ಕಾರಣಕ್ಕೆ ಪಕ್ಷ ಸೇರ್ಪಡೆಯಾಗಿದ್ದೇನೆ’ ಎಂದು ದೀಪಕ್‌ಗೌಡ ತಿಳಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಶಾಲು ಹಾಕಿ ಸಚಿವ ಜಿ.ಪರಮೇಶ್ವರ ಸ್ವಾಗತಿಸಿದರು. ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್‌ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್, ಮುಖಂಡರಾದ ಅಸ್ಲಾಂಪಾಷ, ಮಹೇಶ್, ದಯಾನಂದಗೌಡ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT