ತುಮಕೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎನ್.ನರಸಿಂಹರಾಜು ಅವಿರೋಧವಾಗಿ ಪುನರ್ ಆಯ್ಕೆ ಆಗಿದ್ದಾರೆ.

ಖಜಾಂಚಿಯಾಗಿ ನ್ಯಾಯಾಂಗ ಇಲಾಖೆಯ ಡಿ.ಆರ್.ಹರೀಶ್ ಕುಮಾರ್ ಹಾಗೂ ರಾಜ್ಯ ಪರಿಷತ್ ಸದಸ್ಯರಾಗಿ ಆರೋಗ್ಯ ಇಲಾಖೆಯ ಎಂ.ಗಂಗಾಧರ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ನ.29 ಕೊನೆಯ ದಿನವಾಗಿದ್ದು, ಮೂರು ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪರಶಿವಮೂರ್ತಿ, ರಮೇಶ್ ಹಾಗೂ ಖಜಾಂಚಿ ಸ್ಥಾನಕ್ಕೆ ಕಣಕ್ಕಿಳಿದಿದ್ದ ಷಡಕ್ಷರಿ, ತೇಜೇಶ್, ರಾಜ್ಯ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಿದ್ದ ನರಸಿಂಹಮೂರ್ತಿ, ಮಂಜುನಾಥ್ ಶುಕ್ರವಾರ ನಾಮಪತ್ರ ವಾಪಸ್ ಪಡೆದುಕೊಂಡರು. ಹಾಗಾಗಿ ಅವಿರೋಧ ಆಯ್ಕೆಗೆ ದಾರಿ ಸುಗಮವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.