ಭಾನುವಾರ, ಅಕ್ಟೋಬರ್ 2, 2022
21 °C

ಕೊರಟಗೆರೆ: ಕಸದ ಬುಟ್ಟಿ ಬಳಸಿ ರಾಷ್ಟ್ರಧ್ವಜ ಹಾರಾಟ, ಸಾರ್ವಜನಿಕರಿಂದ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊರಟಗೆರೆ: ತಾಲ್ಲೂಕಿನ ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜ ಹಾರಿಸಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ‘ಹರ್ ಘರ್‌ ತಿರಂಗಾ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಪ್ರಯುಕ್ತ ಗ್ರಾ.ಪಂ ಕಟ್ಟಡದ ಮೇಲೆ ರಾಷ್ಟ್ರ ಧ್ವಜ ಹಾರಿಸುವಾಗ ಕಸದ ಬುಟ್ಟಿ ಬಳಸಿದ್ದು, ಸದ್ಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ. ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನೋಟಿಸ್‌ ಜಾರಿ: ಘಟನೆಯ ಕುರಿತು ಸಮಜಾಯಿಷಿ ನೀಡುವಂತೆ ಗ್ರಾ.ಪಂ ನೀರುಗಂಟಿ ನವೀನ್‌ಕುಮಾರ್‌ಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನೋಟಿಸ್‌ ಜಾರಿ ಮಾಡಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು ತಿಳಿಸದೆ ಇದ್ದರೂ ನೀರುಗಂಟಿ ನವೀನ್‌ಕುಮಾರ್‌ ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ್ದು, ಉದ್ದೇಶ ಪೂರ್ವಕವಾಗಿ ಈ ಕೆಲಸ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ನವೀನ್‌ಕುಮಾರ್‌ ಸರ್ಕಾರಿ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದ್ದು, ಈ ಕುರಿತು ಒಂದು ದಿನದ ಒಳಗೆ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.