ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಎಪಿಎಂಸಿ ಕಾಯ್ದೆ ರದ್ದು ಮಾಡುವಂತೆ ಆಗ್ರಹ, ಹೆದ್ದಾರಿ ತಡೆದು ಪ್ರತಿಭಟನೆ

Last Updated 26 ನವೆಂಬರ್ 2021, 7:33 IST
ಅಕ್ಷರ ಗಾತ್ರ

ತುಮಕೂರು: ಕೃಷಿ ಕಾಯ್ದೆ ರದ್ದು ಮಾಡಿದ್ದು, ಅದೇ ರೀತಿ ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ರದ್ದು ಮಾಡುವಂತೆ ಆಗ್ರಹಿಸಿ ರೈತ ಸಂಘದ ನೇತೃತ್ವದಲ್ಲಿ ರೈತರು ಶುಕ್ರವಾರ ನಗರದ ಹೊರ ವಲಯದ ಜಾಸ್ ಟೋಲ್ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಕೃಷಿ ಕಾಯ್ದೆ ರದ್ದು ಮಾಡುವ ನಿರ್ಧಾರ ಕೈಗೊಂಡಿದ್ದು, ಅದೇ ರೀತಿ ರಾಜ್ಯದಲ್ಲೂ ಎರಡೂ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಬಾರದು. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT