ತುಮಕೂರು: ನಗರದ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹಿರಿಯರ ಕೊಕ್ಕೊ ಚಾಂಪಿಯನ್ ಶಿಪ್ನಲ್ಲಿ ರಾಜ್ಯದ ತಂಡಗಳು ಲೀಗ್ ಪಂದ್ಯಗಳನ್ನು ಗೆದ್ದು ನಾಕೌಟ್ ಹಂತ ಪ್ರವೇಶಿಸಿವೆ.

ಭಾನುವಾರ ಲೀಗ್ ಪಂದ್ಯಗಳು ಮುಗಿದವು. ಸೋಮವಾರ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿವೆ. ಮಂಗಳವಾರ ಸೆಮಿಫೈನಲ್, ಫೈನಲ್ ಪಂದ್ಯಗಳಿಗೆ ಅಂಕಣ ಸಿದ್ಧಗೊಳ್ಳಲಿದೆ. ಭಾನುವಾರ ರಾಜ್ಯದ ಮಹಿಳೆಯರ ತಂಡ ನವದೆಹಲಿ ವಿರುದ್ಧ ಇನ್ನಿಂಗ್ಸ್ ಹಾಗೂ 11 ಅಂಕಗಳಿಂದ ಗೆಲುವು ಸಾಧಿಸಿತು. ಕರ್ನಾಟಕ ತಂಡದ ಪರ ಲಕ್ಷ್ಮಿ, ಪ್ರೀತಿ ಉತ್ತಮ ಆಟವಾಡಿ ಗಮನ ಸೆಳೆದರು.

ಪುರುಷರ ತಂಡ ಎರಡನೇ ಪಂದ್ಯದಲ್ಲಿ ಗೋವಾ ವಿರುದ್ಧ ಇನ್ನಿಂಗ್ಸ್ ಹಾಗೂ 08 ಪಾಯಿಂಟ್ಸ್ಗಳಿಂದ ಗೆದ್ದು ಕ್ವಾರ್ಟರ್ ಫೈನಲ್ಗೆ ಲಗ್ಗೆ ಇಟ್ಟಿದೆ. ಆಟಗಾರರಾದ ಮೌನೇಶ್, ಶಿವಪ್ಪ, ಚಂದ್ರಶೇಖರ್ ಉತ್ತಮ ಆಟ ಪ್ರದರ್ಶಿಸಿದರು. ತಂಡದ ಗೆಲುವಿಗೆ ಕಾರಣರಾದರು.

ಪುರುಷರ ವಿಭಾಗದಲ್ಲಿ ಕರ್ನಾಟಕ ಸೇರಿ ಒಡಿಶಾ, ಹರಿಯಾಣ, ಚಂಡೀಗಢ, ಮಧ್ಯಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಪುದುಚೇರಿ, ಪಂಜಾಬ್, ಜಾರ್ಖಂಡ್, ಗೋವಾ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ತಂಡಗಳು ಪ್ರೀ ಕ್ವಾರ್ಟರ್ ಫೈನಲ್ಗೆ ಅರ್ಹತೆ ಪಡೆದಿವೆ.

ಮಹಿಳೆಯರ ವಿಭಾಗದಲ್ಲಿ ಕರ್ನಾಟಕ, ತಮಿಳುನಾಡು, ಚಂಡೀಗಢ, ಹರಿಯಾಣ, ಜಾರ್ಖಂಡ್, ಪಂಜಾಬ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಉತ್ತರ ಪ್ರದೇಶ, ಗುಜರಾಜ್ ತಂಡಗಳು ಪ್ರೀ ಕ್ವಾರ್ಟರ್ ಫೈನಲ್ ಪಂದ್ಯಗಳನ್ನು ಆಡಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.