ಬುಧವಾರ, ಜೂಲೈ 8, 2020
25 °C

ಆಶಾ ಕಾರ್ಯಕರ್ತೆಯರಿಗೆ ರಕ್ಷಣೆ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕನಾಯಕನಹಳ್ಳಿ: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಪ್ರತಿ ದಿನ ಮನೆ ಮನೆಗೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರು ಕೆಲ ಕಿಡಿಗೇಡಿಗಳ ಮತ್ತು ಪಾನಮತ್ತರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ.
ಸೂಕ್ತ ರಕ್ಷಣೆ ಕೊಡಿ ಎಂದು ತಾಲ್ಲೂಕು ಆಶಾ ಕಾರ್ಯಕರ್ತೆಯರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯದಾದ್ಯಂತ 2 ತಿಂಗಳಿನಿಂದ ಅವಿರತ ಸೇವೆಯಲ್ಲಿರುವ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗಳು ದಿನದಿಂದ ದಿನ ಹೆಚ್ಚಾಗುತ್ತಿರುವುದು ಆಶಾ ಸಮುದಾಯಕ್ಕೆ ಭಯ, ಆತಂಕ ಉಂಟು ಮಾಡಿದೆ. ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡುವವರನ್ನು ಉಗ್ರ ಶಿಕ್ಷೆಗೆ ಒಳಪಡಸಬೇಕು ಎಂದು ಮನವಿ ಮಾಡಿದರು.

ಕೋವಿಡ್ – 19 ಕಾರ್ಯ ನಿಯೋಜನೆ ಮುಗಿಯವವರೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಮಾಸಿಕ ₹10 ಸಾವಿರ ನೀಡಬೇಕು, ಅಗತ್ಯವಿರುವಷ್ಟು ಮಾಸ್ಕ್ ಹಾಗೂ ಸ್ಯಾನಿಟೈಸರ್, ಗ್ಲೌಸ್‌ಗಳನ್ನು ನೀಡಬೇಕು ಎಂದು ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಅಧ್ಯಕ್ಷೆ ಎಂ.ಜಿ.ಪುಷ್ಪಲತಾ, ಜಯಂತಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು