ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್‌ ಫಲಿತಾಂಶ: ತನಿಖೆಗೆ ಒತ್ತಾಯ

Published 10 ಜೂನ್ 2024, 4:20 IST
Last Updated 10 ಜೂನ್ 2024, 4:20 IST
ಅಕ್ಷರ ಗಾತ್ರ

ತುಮಕೂರು: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಡೆದಿದ್ದ ನೀಟ್‌ ಪರೀಕ್ಷೆ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು ಅನುಮಾನ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಸೂಕ್ತ ತನಿಖೆ ನಡೆಸಿ ಗೊಂದಲ ಬಗೆಹರಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್‌ ಹಾಲಪ್ಪ ಒತ್ತಾಯಿಸಿದ್ದಾರೆ.

ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ 9 ಜನ 720ಕ್ಕೆ 720 ಅಂಕ ಪಡೆದಿದ್ದಾರೆ. ಇವರಿಗೆ ನೀಡಿರುವ ಕೃಪಾಂಕ ಗೊಂದಲಕ್ಕೆ ಕಾರಣವಾಗಿದೆ. ಕಷ್ಟಪಟ್ಟು ಪರೀಕ್ಷೆ ಬರೆದು ರ್‍ಯಾಂಕ್‌ ಗಳಿಸಿದವರನ್ನು ಅನುಮಾನದಿಂದ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ವಿದ್ಯಾರ್ಥಿಗಳ ನೈತಿಕ ಸ್ಥೈರ್ಯ ಕುಸಿದಿದ್ದು, ಕೆಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಮತ್ತಷ್ಟು ಹೆಚ್ಚಾಗದಂತೆ ಸರ್ಕಾರ ತಕ್ಷಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಸೂಕ್ತ ತನಿಖೆ ನಡೆಸಿ, ಪ್ರತಿಭಾವಂತ ಮಕ್ಕಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಜೂನ್‌ 14ರಂದು ಪ್ರಕಟವಾಗಬೇಕಿದ್ದ ನೀಟ್ ಫಲಿತಾಂಶವನ್ನು ಲೋಕಸಭಾ ಚುನಾವಣೆಯ ಗೊಂದಲದ ವಾತಾವರಣದಲ್ಲಿ ಬಿಡುಗಡೆಗೊಳಿಸಿದ್ದಾರೆ. ಯಾವ ಉದ್ದೇಶಕ್ಕಾಗಿ ಹೀಗೆ ಮಾಡಿದ್ದಾರೆ ಎಂದು ತಿಳಿಯಬೇಕಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT