ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿ ಮಾರಶೆಟ್ಟಿಹಳ್ಳಿಯಲ್ಲಿ ಸೋಮವಾರ ರೈತ ಮಹೇಶ್ ಅವರ 250ಕ್ಕೂ ಹೆಚ್ಚು ಅಡಿಕೆ ಸಸಿಗಳನ್ನು ಕಡಿದು ಹಾಕಿದ್ದನ್ನು ವಿರೋಧಿಸಿ ಮಂಗಳವಾರ ರೈತ ಸಂಘದ ಪದಾಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿದರು.

ರೈತ ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಲೋಕೇಶ್ ಮಾತನಾಡಿ, ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಿರುವ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದರಿಂದಲೇ ಬಡ ರೈತರ ಮೇಲೆ ದೌರ್ಜನ್ಯ ನಡೆಯುತ್ತಿವೆ. ಒಂದು ವರ್ಷದಲ್ಲಿ 6ರಿಂದ 7 ಕಡೆ ರೈತರ ಅಡಿಕೆ ಸಸಿಗಳನ್ನು ಕಡಿದಿರುವುದು ದುರಾದೃಷ್ಟಕರ. ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ವೈಫಲ್ಯದಿಂದಾಗಿಯೇ ರೈತರ ಮೇಲೆ ದೌರ್ಜನ್ಯ ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಡಿಕೆ ಸಸಿ ಕಡಿಯುತ್ತಿರುವ ವಿಚಾರವನ್ನು ಅನೇಕ ಬಾರಿ ತಾಲ್ಲೂಕು ಆಡಳಿತದ ಗಮನಕ್ಕೆ ತಂದಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕುಂದುಕೊರತೆ ಸಭೆಗಳನ್ನು ಏರ್ಪಡಿಸಬೇಕಿರುವ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇದುವರೆಗೂ ಯಾವುದೇ ಕುಂದುಕೊರತೆ ಸಭೆ ನಡೆಸದೆ ರೈತರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕು ಮಟ್ಟದ ಹಲವು ಅಧಿಕಾರಿಗಳು ದೀರ್ಘಕಾಲ ತಾಲ್ಲೂಕಿನಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ವ್ಯವಸ್ಥೆ ಜಡ್ಡುಗಟ್ಟಿದೆ. ಅಂತಹ ಅಧಿಕಾರಿಗಳನ್ನು ಬೇರೆಡೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕು ಆಡಳಿತ, ಜಿಲ್ಲಾಧಿಕಾರಿ ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ರೈತ ಮಹೇಶ್ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಿಕೊಡಬೇಕು. ಇಲ್ಲವಾದಲ್ಲಿ ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ರೈತ ಸಂಘದ ಪದಾಧಿಕಾರಿಗಳು, ರೈತರು, ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.