ಮಂಗಳವಾರ, ಡಿಸೆಂಬರ್ 1, 2020
21 °C
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಂಡಿತ್ ಜವಹರ್‌ಲಾಲ್ ನೆಹರೂ ಜನ್ಮದಿನ

ಆಧುನಿಕ ಭಾರತಕ್ಕೆ ಬುನಾದಿ ಹಾಕಿದ ನೆಹರೂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಂಡಿತ್ ಜವಹರ್‌ಲಾಲ್ ನೆಹರೂ ಜನ್ಮದಿನ ಆಚರಿಸಲಾಯಿತು.

ನೆಹರೂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಜಿ.ಪಂ ಸದಸ್ಯ ಕೆಂಚಮಾರಯ್ಯ, ‘ಪಂಚವಾರ್ಷಿಕ ಯೋಜನೆಗಳು ಮತ್ತು ಪಂಚಶೀಲ ತತ್ವಗಳ ಮೂಲಕ ಆಧುನಿಕ ಭಾರತಕ್ಕೆ ಭದ್ರ ಬುನಾದಿ ಹಾಕಿದವರು ನೆಹರೂ. ಮಹಾತ್ಮಗಾಂಧಿ, ನೆಹರೂ, ಅಂಬೇಡ್ಕರ್ ಇಲ್ಲದ ಅಧುನಿಕ ಭಾರತವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರ ಫಲವಾಗಿ ಐಐಟಿ, ಐಐಎಂಎಸ್ ಸೇರಿದಂತೆ ಹಲವಾರು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಭಾರತದಲ್ಲಿ ತಲೆ ಎತ್ತಿದವು. ಇವುಗಳಲ್ಲಿ ಕಲಿತ ಲಕ್ಷಾಂತರ ಜನರು ಪ್ರಪಂಚದ ವಿವಿಧೆಡೆ ನೆಲೆಸಿ, ಹಲವಾರು ಸಂಶೋಧನೆಗಳಲ್ಲಿ ತೊಡಗಿ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಆಧುನಿಕ ಭಾರತವನ್ನು ಭೌತಿಕವಾಗಿ ಮತ್ತು ಬೌದ್ಧಿಕವಾಗಿ ಬೆಳೆಸುವಲ್ಲಿ ನೆಹರೂ ಶ್ರಮ ಹೆಚ್ಚಾಗಿದೆ ಎಂದರು.

ರಾಷ್ಟ್ರದಲ್ಲಿ ಇಂದು ಬಿಜೆಪಿ ಮತ್ತು ಸಂಘಪರಿವಾರದ ಮುಖಂಡರು ದ್ವೇಷ ಭಾವನೆ ಮೂಡಿಸಿ ಜನರನ್ನು ವಿಭಜಿಸಿದ್ದಾರೆ. ಪಕ್ಷದ ಕಾರ್ಯಕರ್ತರು ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂಬುದನ್ನು ಮನೆ ಮನೆಗೆ ತಿಳಿಸುವ ಮೂಲಕ ಕೋಮುವಾದಿ ಬಿಜೆಪಿ ಅಜೆಂಡಾ ಜಾರಿಯಾಗದಂತೆ ಮಾಡಬೇಕು ಎಂದು ಹೇಳಿದರು.

ಮುಖಂಡರಾದ ರೇವಣ್ಣ ಸಿದ್ದಯ್ಯ, ನಟರಾಜು, ಶ್ರೀನಿವಾಸ, ಪ್ರಕಾಶ್, ಸುಜಾತಾ, ಆಟೊ ರಾಜು, ಮೆಹಬೂಬ್ ಪಾಷ, ಲಕ್ಷ್ಮಣ, ಕುಮಾರಸ್ವಾಮಿ, ಗೀತಮ್ಮ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು