ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇತಾಜಿ ಅಪ್ರತಿಮ ನಾಯಕ

ಸುಭಾಷ್‌ ಚಂದ್ರ ಬೋಸ್‌ ಜನ್ಮ ದಿನ ಆಚರಣೆ
Last Updated 23 ಜನವರಿ 2023, 14:39 IST
ಅಕ್ಷರ ಗಾತ್ರ

ತುಮಕೂರು: ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಜನ್ಮ ದಿನದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಿಂದ ನಗರದ ವಿವಿಧೆಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಎಬಿವಿಪಿ ತುಮಕೂರು ವಿಭಾಗದ ಸಂಘಟನಾ ಕಾರ್ಯದರ್ಶಿ ಅಪ್ಪು ಪಾಟೀಲ್‌, ‘ಬ್ರಿಟೀಷರ ವಿರುದ್ಧ ವೀರಾವೇಶದಿಂದ ಹೋರಾಡುತ್ತಲೇ ಭಾರತೀಯರಲ್ಲಿ ರಾಷ್ಟ್ರ ಭಕ್ತಿಯ ಪ್ರಬಲ ಕಿಡಿಯನ್ನು ಹೊತ್ತಿಸಿದ ಹೋರಾಟಗಾರ ನೇತಾಜಿ. ದೇಶ ಕಂಡ ಅಪ್ರತಿಮ ನಾಯಕ. ಛತ್ರಪತಿ ಶಿವಾಜಿ, ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಪ್ರಭಾವಿತರಾಗಿದ್ದರು’ ಎಂದು ಹೇಳಿದರು.

ಬ್ರಿಟಿಷರಿಗೆ ತಮ್ಮ ಪ್ರಖರ ನಿಲುವುಗಳಿಂದಲೇ ಬಿಸಿ ಮುಟ್ಟಿಸಿದ್ದರು. ಕ್ರಾಂತಿಕಾರಿ ನಿಲುವಿನ ನಾಯಕರಾಗಿ ಹೊರಹೊಮ್ಮಿದರು. ವಿದೇಶದಲ್ಲೂ ಸ್ವಾತಂತ್ರ್ಯ ಹೋರಾಟವನ್ನು ಸಂಘಟಿಸಿದ್ದರು ಎಂದರು.

ಎಬಿವಿಪಿ ಕಾರ್ಯಕರ್ತರಾದ ಹರ್ಷವರ್ಧನ, ಸಿದ್ಧಾರ್ಥ್, ಆಕಾಶ್, ಜೀವನ್, ವಿನಯ್, ಸಿದ್ದೇಶ್‌ ಭಾಗವಹಿಸಿದ್ದರು. ವಿದ್ಯಾವಾಹಿನಿ ಪ್ರಥಮದರ್ಜೆ ಕಾಲೇಜು, ಶೇಷಾದ್ರಿಪುರಂ ಕಾಲೇಜು, ಸಿದ್ಧಗಂಗಾ ಮಹಿಳಾ ಪದವಿ ಕಾಲೇಜು, ಎಸ್‌ಎಸ್‌ಐಟಿ, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು, ವಿ.ವಿ ಕಲಾ ಕಾಲೇಜು ಒಳಗೊಂಡಂತೆ ವಿವಿಧೆಡೆ ಜಯಂತಿ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT