ತಿಪಟೂರು: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ನಂತರ ಫಿರ್ದೋಸ್ (26) ಎಂಬ ಬಾಣಂತಿ ಶನಿವಾರ ಮೃತಪಟ್ಟಿದ್ದಾರೆ.

ಬೆಂಗಳೂರಿನ ಡಿ.ಜಿ.ಹಳ್ಳಿ ಬಡಾವಣೆ ನಿವಾಸಿ ಫಿರ್ದೋಸ್ ಹೆರಿಗೆಗಾಗಿ ತಿಪಟೂರಿನ ತವರು ಮನೆಗೆ ಬಂದಿದ್ದರು. ಶುಕ್ರವಾರ ಹೆರಿಗೆ ನೋವು ಕಾಣಿಸಿಕೊಂಡ ನಂತರ ಅವರನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಧ್ಯಾಹ್ನ 1 ಗಂಟೆಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಶನಿವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಪ್ರತಿಕ್ರಿಯೆಗೆ ಬಾಣಂತಿ ಕುಟುಂಬದವರು ಲಭ್ಯರಾಗಿಲ್ಲ.

‘ಶ್ವಾಸಕೋಶದ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿ(ಪಲ್ಮನರಿ ಎಂಬಾಲಿಸಮ್) ಬಾಣಂತಿ ಮೃತಪಟ್ಟಿದ್ದಾರೆ’ ಎಂದು ಆಸ್ಪತ್ರೆ ಆಡಳಿತ ಅಧಿಕಾರಿ ಶಿವಕುಮಾರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.