ತುಮಕೂರು: ಬೆಂಗಳೂರು– ಕುಕ್ಕೆ ಸುಬ್ರಹ್ಮಣ್ಯ ನಡುವೆ ಹೊಸ ರೈಲು ಸಂಚಾರಕ್ಕೆ ಏ. 12ರಂದು ಚಾಲನೆ ನೀಡಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ನಗರದಲ್ಲಿ ಬುಧವಾರ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಭಕ್ತರು, ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚಾರ ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದಿನಕ್ಕೆ ನಾಲ್ಕು ಬಾರಿ ಸಂಚರಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಹಾವೇರಿ– ಬೆಂಗಳೂರು ನಡುವೆ ಒಂದೇ ಭಾರತ್ ರೈಲು ಸಂಚಾರಕ್ಕೂ ಏ. 11ರಂದು ಚಾಲನೆ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ಮಾರ್ಗದಲ್ಲೂ ರೈಲು ಸಂಚಾರ ಆರಂಭಿಸಲಾಗುವುದು ಎಂದು ಹೇಳಿದರು.

ಚಿಕ್ಕಮಗಳೂರು– ಬೇಲೂರು ನಡುವೆ ರೈಲ್ವೆ ಹಳಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ರೈಲು ಸಂಚಾರಕ್ಕೆ ಪರಿಶೀಲನೆ ಕಾರ್ಯ ನಡೆದಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.