ಕೊರಟಗೆರೆ: ಹೊಸ ವರ್ಷದ ಪ್ರಯುಕ್ತ ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಸೋಮವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಪ್ರತಿ ವರ್ಷದಂತೆ ಈ ಬಾರಿಯೂ ಸಹ ದೇವಸ್ಥಾನವನ್ನು ವಿವಿಧ ಹೂವುಗಳಿಂದ ಸಿಂಗರಿಸಲಾಗಿತ್ತು. ರಾಜ್ಯದ ವಿವಿಧ ಕಡೆಗಳಿಂದ ಭಕ್ತರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದ ದೃಶ್ಯಗಳು ಕಂಡು ಬಂದವು. ದೇಗುಲಕ್ಕೆ ಬರುವ ಭಕ್ತರಿಗೆ ಮಹಾಲಕ್ಷ್ಮಿ ಸೇವಾ ಟ್ರಸ್ಟ್ ವತಿಯಿಂದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು.

ವೃದ್ಧರು, ಅಂಗವಿಕಲರು, ಶಾಲಾ ಮಕ್ಕಳಿಗೆ ನೇರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ದೇವಾಲಯದ ಬಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.