ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ಕೇಂದ್ರ ರಾಷ್ಟ್ರೀಯ ಹೆದ್ದಾರಿ 73 ಹಾಗೂ ಶಿರಾ-ಮೈಸೂರು ರಾಜ್ಯ ಹೆದ್ದಾರಿ ಕೂಡುವ ಸ್ಥಳ. ನಿಟ್ಟೂರಿನ ಹೃದಯ ಭಾಗದಲ್ಲಿದ್ದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿತ್ತು. ಕೆಲವು ವರ್ಷ ಕಾರ್ಯನಿರ್ವಹಿಸಿದ ನೀರಿನ ಘಟಕ ನಂತರ ಕೆಟ್ಟು ಹೋಗಿ ಅನೇಕ ವರ್ಷಗಳೇ ಕಳೆದಿವೆ.

ಘಟಕ ಕೆಟ್ಟು ಹೋದ ನಂತರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರು ಇಲ್ಲದೆ ಪರದಾಡುವಂತಾಗಿದೆ. ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬ ವಿಚಾರ ಸಂಬಂಧಿಸಿದ ಅಧಿಕಾರಿಗಳ ಗಮನದಲ್ಲಿ ಇದ್ದರೂ, ನೀರಿನ ಘಟಕವನ್ನು ದುರಸ್ತಿ ಮಾಡಿಸದೆ, ಪರ್ಯಾಯ ವ್ಯವಸ್ಥೆಯನ್ನೂ ಮಾಡದೆ ಮೀನಾವೇಷ ಎಣಿಸುತ್ತಿದ್ದಾರೆ ಎಂದು ಪ್ರಯಾಣಿಕರು ದೂರಿದ್ದಾರೆ

ರಾಷ್ಟ್ರೀಯ ಹೆದ್ದಾರಿ 73 ಬಸ್ ನಿಲ್ದಾಣದ ಮಧ್ಯಭಾಗದಲ್ಲಿ ಹಾದು ಹೋಗಿರುವುದರಿಂದ ಬಸ್ ನಿಲ್ದಾಣ ಕಿರಿದಾಗಿದ್ದು ಪ್ರಯಾಣಿಕರು ಕುಳಿತುಕೊಳ್ಳಲೂ ಸ್ಥಳವಿಲ್ಲದಂತಾಗಿದೆ.

ಗ್ರಾಮ ಪಂಚಾಯಿತಿ ಅಥವಾ ಕೆಎಸ್ಆರ್ಟಿಸಿ ಸಂಸ್ಥೆಯವರಾದರೂ ಪ್ರಯಾಣಿಕರ ಅನುಕೂಲಕ್ಕಾಗಿ ತಾತ್ಕಾಲಿಕವಾಗಿಯಾದರೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬಹುದಿತ್ತು. ಆದರೆ ಎಲ್ಲರೂ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಸಾರ್ವಜನಿಕರ ದೂರಿದ್ದಾರೆ.

ಗುಬ್ಬಿ ಶಾಸಕ ಶ್ರೀನಿವಾಸ್ ಅವರೆ ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷರಾಗಿದ್ದರೂ ಬಸ್ ನಿಲ್ದಾಣದಲ್ಲಿ ಅಗತ್ಯ ಸೌಕರ್ಯ ಒದಗಿಸಲು ಮುಂದಾಗದಿರುವುದು ದುರಾದೃಷ್ಟಕರ ಎನ್ನುತ್ತಾರೆ ಪ್ರಯಾಣಿಕರು. ಶಾಸಕರು ಮತ್ತು ಅಧಿಕಾರಿಗಳು ತುರ್ತುಕ್ರಮ ವಹಿಸಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನೀರಿನ ವ್ಯವಸ್ಥೆ ಮಾಡಬೇಕು. ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಬಸ್ ನಿಲ್ದಾಣ ಚಿಕ್ಕದಿರುವುದರಿಂದ ಯಾವ ಬಸ್ಗಳು ಯಾವ ಕಡೆ ಹೋಗುತ್ತವೆ ಎಂಬ ಮಾಹಿತಿ ತಿಳಿಯದಾಗುತ್ತಿದೆ. ಬಸ್ ನಿಲ್ದಾಣದಲ್ಲಿ ಬಸ್ ಬಂದು ನಿಂತಾಗ ಪ್ರಯಾಣಿಕರು ಬಸ್ ಹತ್ತಲು ಹೋಗಿ ಗೊಂದಲ ಉಂಟಾಗುತ್ತಿದೆ. ಪ್ರಯಾಣಿಕರಿಗೆ ಬಸ್ ಗುದ್ದಿ ಅಪಘಾತಗಳು ಉಂಟಾಗಿವೆ. ಕಿರಿದಾಗಿರುವ ಬಸ್ ನಿಲ್ದಾಣದಲ್ಲಿ ಖಾಸಗಿ ಆಟೊದವರು ಬಂದು ನಿಲ್ಲುವುದು ಮತ್ತಷ್ಟು ಕಿರಿಕಿರಿಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎಂಬುದು ಸ್ಥಳೀಯರ ಒತ್ತಾಯ.

ಸಂಬಂಧಿಸಿದವರು ತುರ್ತು ಕ್ರಮ ಕೈಗೊಂಡು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವತ್ತ ಗಮನ ಹರಿಸಬೇಕು ಎಂದು ಪ್ರಯಾಣಿಕ ಶಿವಕುಮಾರ್ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-17-1418008204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.