ಭಾನುವಾರ, ಸೆಪ್ಟೆಂಬರ್ 26, 2021
22 °C

ದೊಡ್ಡ ಅಗ್ರಹಾರ ಮದ್ಯ ಮಾರಾಟ ನಿಷೇಧಿತ ಗ್ರಾಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ತಾಲ್ಲೂಕಿನ ದೊಡ್ಡ ಅಗ್ರಹಾರ ಗ್ರಾಮವನ್ನು ಮದ್ಯ ಮಾರಾಟ ನಿಷೇಧಿತ ಗ್ರಾಮ ಎಂದು ಪೊಲೀಸ್ ಇಲಾಖೆ ಘೋಷಣೆ ಮಾಡಿ ಭಾನುವಾರ ನಾಮಫಲಕ ಹಾಕಿತು.

ದೊಡ್ಡ ಅಗ್ರಹಾರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಹಲವಾರು ಬಾರಿ ಪೊಲೀಸರಿಗೆ ದೂರುಗಳು ಬಂದಿದ್ದವು. ಜೊತೆಗೆ ಅಕ್ರಮ ಮದ್ಯ ಮಾರಾಟದಿಂದಾಗಿ ಗ್ರಾಮದಲ್ಲಿ ನೆಮ್ಮದಿ ಹಾಳಾಗಿದ್ದು, ಹಲವಾರು ಯುವಕರು ಕುಡಿತದ ಚಟಕ್ಕೆ ಬಲಿಯಾಗುತ್ತಿರುವ ಬಗ್ಗೆ ಗ್ರಾಮಸ್ಥರು ಮೇ 7ರಂದು ಪೊಲೀಸರಿಗೆ ದೂರು ನೀಡಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದರು.

ಸ್ಥಳಕ್ಕೆ ಭೇಟಿ ನೀಡಿದ್ದ ಇನ್‌ಸ್ಪೆಕ್ಟರ್ ಶಿವಕುಮಾರ್ ಹಾಗೂ ಅಬಕಾರಿ ಇನ್‌ಸ್ಪೆಕ್ಟರ್ ರವೀಂದ್ರ ಅವರು ಗ್ರಾಮಸ್ಥರ ಅಹವಾಲುಗಳನ್ನು ಕೇಳಿ ಮದ್ಯ ಮಾರಾಟ ನಿಷೇಧಿತ ಗ್ರಾಮ ಎಂದು ಘೋಷಿಸುವುದಾಗಿ ಭರವಸೆ ನೀಡಿದ್ದರು.

ಮದ್ಯ ಮಾರಾಟ ನಿಷೇಧಿತ ಗ್ರಾಮ ನಾಮ ಫಲಕವನ್ನು ಅನಾವರಣ ಮಾಡಿ ಮಾತನಾಡಿದ ಸಿಪಿಐ ಶಿವಕುಮಾರ್, ಜನರಲ್ಲಿ ಮನಪರಿವರ್ತನೆ ಆದರೆ ಏನು ಬೇಕಾದರೂ ಸಹ ಸಾಧನೆ ಮಾಡಬಹುದು ಎನ್ನುವುದಕ್ಕೆ ಈ ಗ್ರಾಮವೇ ಉದಾಹರಣೆಯಾಗಿದೆ ಎಂದರು.

ಪಿಎಸ್ಐ ಶ್ರೀನಿವಾಸ್, ಮುಖಂಡ ದಾರ ಚನ್ನೇಗೌಡ, ದಲಿತ ಮುಖಂಡ ಜೆ.ಎನ್.ರಾಜಸಿಂಹ, ಜಗನ್ನಾಥ್, ನಾಗೇಂದ್ರ, ಸತೀಶ್, ಆಕಾಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು