ಗುರುವಾರ , ಫೆಬ್ರವರಿ 27, 2020
19 °C

ಸಿದ್ಧಗಂಗೆಗೆ ಮೂರು ತಿಂಗಳಿನಿಂದ ಇಲ್ಲ ಅಕ್ಕಿ ಭಾಗ್ಯ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಅನ್ನ, ಅಕ್ಷರ, ಜ್ಞಾನ ದಾಸೋಹಕ್ಕೆ ಹೆಸರಾದ ಸಿದ್ಧಗಂಗಾ ಮಠದಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಸಾವಿರಾರು ಮಕ್ಕಳ ಹಸಿವು ನೀಗಿಸುತ್ತಿದ್ದ ಅಕ್ಕಿ ಮತ್ತು ಗೋಧಿಯ ಸರಬರಾಜು ಮೂರು ತಿಂಗಳಿನಿಂದ ನಿಂತಿದೆ.

ಕೇಂದ್ರ ಸರ್ಕಾರದ ಅನ್ನಪೂರ್ಣ ಯೋಜನೆಯಡಿ ಮಠದ ಮಕ್ಕಳಿಗಾಗಿ ಪ್ರತಿ ತಿಂಗಳು 735 ಕ್ವಿಂಟಲ್‌ ಅಕ್ಕಿ, 350 ಕ್ವಿಂಟಲ್‌ ಗೋಧಿಯನ್ನು ಸರಬರಾಜು ಮಾಡಲಾಗುತ್ತಿತ್ತು.

‘ಈ ವಿಷಯದ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆದಿದ್ದೇವೆ. ಸದ್ಯ ಮಠದಲ್ಲಿ ಎರಡು ತಿಂಗಳವರೆಗೆ ಆಗುವಷ್ಟು ದವಸ–ಧಾನ್ಯಗಳ ಸಂಗ್ರಹವಿದೆ. ಆ ಮೇಲೆ ತೊಂದರೆ ಆಗಬಹುದು’ ಎಂದು ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಪೂಜ್ಯರು ಲಿಂಗಕ್ಯರಾದಾಗ, ಬಹಳಷ್ಟು ರೈತರು ಭತ್ತವನ್ನೇ ದಾನವಾಗಿ ನೀಡಿದ್ದರು. ಅದನ್ನೆ ಅಕ್ಕಿಯಾಗಿಸಿ ದಾಸೋಹಕ್ಕೆ ಕೊರತೆ ಆಗದಂತೆ ನೋಡಿಕೊಳ್ಳುತ್ತಿದ್ದೇವೆ’ ಎಂದು ಅವರು ತಿಳಿಸಿದರು.

‘ಕೇಂದ್ರ ಸರ್ಕಾರದ ಆದೇಶದಂತೆ ಜಿಲ್ಲೆಯ 16 ಸಂಸ್ಥೆಗಳಿಗೆ ಆಹಾರ ಧಾನ್ಯಗಳ ಪೂರೈಕೆ ನಿಂತಿದೆ. ಅದರಲ್ಲಿ ಸಿದ್ಧಗಂಗಾ ಮಠವೂ ಸೇರಿದೆ. ಈ ವಿಷಯ ಜಿಲ್ಲಾ ಉಸ್ತುವಾರಿ ಸಚಿವರಿಗೂ ಗೊತ್ತಿದೆ’ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ಉಪನಿರ್ದೇಶಕ ಶಿವಲಿಂಗಯ್ಯ ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು