ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಸಂವಾದ ಬೇಡ; ಸಭೆ ನಡೆಸಿ

ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆ
Last Updated 19 ಸೆಪ್ಟೆಂಬರ್ 2020, 2:45 IST
ಅಕ್ಷರ ಗಾತ್ರ

ತುಮಕೂರು: ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆಯನ್ನು ವಿಡಿಯೊ ಸಂವಾದದ ಮೂಲಕ ಕರೆದಿರುವುದನ್ನು ರದ್ದುಪಡಿಸಿ ಪೊಲೀಸ್ ಚಿಲುಮೆ ಅಥವಾ ಬಾಲ ಭವನದಲ್ಲಿ ಸಭೆ ಕರೆಯಬೇಕು ಎಂದು ಆಗ್ರಹಿಸಿ ಜಿಲ್ಲಾ ದಲಿತ ಸಂಘಟನೆಗಳ ಮುಖಂಡರ ಒಕ್ಕೂಟ ನಗರದಲ್ಲಿ ಪ್ರತಿಭಟಿಸಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಒಕ್ಕೂಟದ ಮುಖಂಡರು, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ವಿಡಿಯೊ ಸಂವಾದದ ಮೂಲಕ ನಡೆಸಲು ನಿರ್ಧರಿಸಿರುವ ಸಭೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿದರು.

ಸೆ.21ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಡಿಯೊ ಸಂವಾದ ಕರೆಯಲಾಗಿದೆ. ಆದರೆ ಸಾಕಷ್ಟು ಮುಖಂಡರಲ್ಲಿ ಸ್ಕ್ರೀನ್‍ಟಚ್ ಮೊಬೈಲ್ ಇಲ್ಲ. ಕೀ ಪ್ಯಾಯ್ಡ್ ಮೊಬೈಲ್‍ಗಳನ್ನು ಬಳಸುತ್ತಿದ್ದಾರೆ. ಜನಾಂಗದ ತುರ್ತು ಸಮಸ್ಯೆಗಳು ಸಾಕಷ್ಟಿವೆ. ಈ ಹಿಂದೆ ಯಾವ ರೀತಿ ಸಭೆ ಕರೆಯುತ್ತಿದ್ದರೋ ಅದೇ ರೀತಿ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.

ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರಂಗನಾಥ್, ‘ಕೋವಿಡ್ ಇರುವುದರಿಂದ ವಿಡಿಯೊ ಸಂವಾದದ ಮೂಲಕ ಸಭೆ ನಡೆಸುವುದಾಗಿ ಉಪವಿಭಾಗಾಧಿಕಾರಿ ಹೇಳುತ್ತಾರೆ. ಆದರೆ ಮುಖಾಮುಖಿ ಸಭೆ ನಡೆಸಿದರೂ ನಮ್ಮ ಸಮಸ್ಯೆಗಳು ಬಗೆಹರಿಯುವುದಿಲ್ಲ. ಇನ್ನು ವಿಡಿಯೊ ಸಂವಾದದ ಮೂಲಕ ನಡೆಸುವ ಸಭೆ ಯಲ್ಲಿ ಎಷ್ಟರ ಮಟ್ಟಿಗೆ ಸಮಸ್ಯೆ ಗಳನ್ನು ಬಗೆಹರಿಸುತ್ತಾರೆ’ ಎಂದು ಪ್ರಶ್ನಿಸಿದರು.

ದಸಂಸ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಮುಖಂಡರಾದ ಪೂಜ ಹನುಮಯ್ಯ, ರಾಜೇಶ್, ಜೆಸಿಬಿ ವೆಂಕಟೇಶ್, ಗಂಗಯ್ಯ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT