ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಡಿಸಿ

Published 17 ಮೇ 2024, 7:20 IST
Last Updated 17 ಮೇ 2024, 7:20 IST
ಅಕ್ಷರ ಗಾತ್ರ

ತುಮಕೂರು: ಎತ್ತಿನಹೊಳೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಗುರುವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ದೊಡ್ಡಗುಣಿ, ತಿಪಟೂರಿನ ರಜತಾದ್ರಿಪುರ, ಚಿಕ್ಕನಾಯಕನಹಳ್ಳಿಯ ಜೆ.ಸಿ.ಪುರ ಗ್ರಾಮಗಳಿಗೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲಿಸಿದರು.

‘ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ವ್ಯಾಪ್ತಿಯಲ್ಲಿ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಇದುವರೆಗೂ ಪೂರ್ಣಗೊಂಡಿಲ್ಲ. ಕೂಡಲೇ ಭೂಸ್ವಾಧೀನ ಪ್ರಕ್ರಿಯೆ ಮುಗಿಸಿ, ಅಗತ್ಯ ಕ್ರಮಕೈಗೊಳ್ಳಬೇಕು. ತೋಟಗಾರಿಕೆ, ಅರಣ್ಯ ಇಲಾಖೆ ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲು ಸಹಕರಿಸಬೇಕು’ ಎಂದು ನಿರ್ದೇಶಿಸಿದರು.

ವಿಶೇಷ ಭೂಸ್ವಾಧೀನಾಧಿಕಾರಿ ಜಿ.ಎನ್.ಮಂಜುನಾಥ, ಕಾರ್ಯಪಾಲಕ ಎಂಜಿನಿಯರ್‌ ಆನಂದ್‌ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT