ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇವು ಬ್ಯಾಂಕ್ ಬಳಿ ರೈತರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ

Published 1 ಮೇ 2024, 6:16 IST
Last Updated 1 ಮೇ 2024, 6:16 IST
ಅಕ್ಷರ ಗಾತ್ರ

ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಗ್ರಾಮದ ಸುಬ್ರಹ್ಮಣೇಶ್ವರ ದೇಗುಲದ ಬಳಿಯ ಮೇವು ಬ್ಯಾಂಕ್‌ಗೆ ಸೋಮವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಭೇಟಿ ನೀಡಿ ಪರಿಶೀಲಿಸಿದರು.

ಮೇವು ಪಡೆಯಲು ಬರುವ ರೈತರಿಗೆ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಬೆಂಕಿ ಅವಘಡ ಸಂಭವಿಸದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಅಗಸರ ಕುಂಟೆ ಕೆರೆಗೆ ಭೇಟಿ ನೀಡಿ ಪರಿಶೀಲಿಸಿ, ಕುಂಟೆಯ ನೀರಿನಲ್ಲಿ ಇಳಿಯದಂತೆ ಎಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು. ಸದ್ಯ ಶೀಘ್ರ ಕುಂಟೆ ತುಂಬಿಸಲು ನಾಗಲಮಡಿಕೆ ಡ್ಯಾಂನಿಂದ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಿದರು.

ಪಟ್ಟಣದ ಹೊರವಲಯದಲ್ಲಿನ ತುಂಗಭದ್ರಾ ನೀರು ಸಂಗ್ರಹಣಾಗಾರವನ್ನು ಪರಿಶೀಲಿಸಿ ಪೈಪ್‌ಲೈನ್ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಉಪ ವಿಭಾಗಾಧಿಕಾರಿ ಗೊಟುರು ಶಿವಪ್ಪ, ತಹಶೀಲ್ದಾರ್ ಸಂತೋಷ್ ಕುಮಾರ್, ಪಾವಗಡ ಕಾರ್ಯನಿರ್ವಹಣಾಧಿಕಾರಿ ಜಾನಕಿರಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT