ಬುಧವಾರ, ಜುಲೈ 28, 2021
21 °C

ಸೋಂಕು ಹೆಚ್ಚಾದರೆ ಅಧಿಕಾರಿಗಳೇ ಹೊಣೆ: ಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಚಿವ ಮಾಧುಸ್ವಾಮಿ‌

ತುರುವೇಕೆರೆ: ತಾಲ್ಲೂಕಿನ ಅಧಿಕಾರಿಗಳು ಕೊರೊನಾ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ನಿಮ್ಮನ್ನೆ ಹೊಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಎಚ್ಚರಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕೊರೊನಾ ತಡೆ ಕುರಿತು ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಇಲ್ಲಿ 300ಕ್ಕೂ ಹೆಚ್ಚು ಹಾಸಿಗೆ ವ್ಯವಸ್ಥೆ ಮಾಡಿಕೊಳ್ಳಿ. ಮಾಯಸಂದ್ರ ಹಾಗೂ ದಂಡಿನಶಿವರದಲ್ಲಿಯೂ ತಲಾ 5 ಹಾಸಿಗೆ ವ್ಯವಸ್ಥೆ ಮಾಡಿಕೊಳ‍್ಳಿ ಎಂದರು.

ಸಭೆಯಲ್ಲಿ ಶಾಸಕರಾದ ಮಸಾಲ ಜಯರಾಂ, ನಾಗೇಶ್, ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಎಸ್‌ಪಿ ವಂಶಿಕೃಷ್ಣ, ಸಿಇಒ ಶುಭಾ ಕಲ್ಯಾಣ, ಉಪವಿಭಾಗಾಧಿಕಾರಿ ನಂದಿನಿ, ತಹಶೀಲ್ದಾರ್ ಆರ್.ನಯಿಂಉನ್ನಿಸಾ,  ವೈಧ್ಯಾಧಿಕಾರಿ ಡಾ.ಶ್ರೀಧರ್, ಸುಪ್ರಿಯಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು