ಬುಧವಾರ, ಏಪ್ರಿಲ್ 8, 2020
19 °C

ಜನವರಿ 21ರಂದು ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ, ಶಿವಾನುಭವಗೋಷ್ಠಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲಾ ವೀರಶೈವ ಲಿಂಗಾಯತ ಸೇವಾ ಸಮಿತಿಯಿಂದ ಜ.21ರಂದು 3 ಗಂಟೆಗೆ ಸಿದ್ದೇಶ್ವರ ಸಮುದಾಯ ಭವನದಲ್ಲಿ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಮತ್ತು ಶಿವಾನುಭವಗೋಷ್ಠಿ ಆಯೋಜಿಸಲಾಗಿದೆ ಎಂದು ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಕೊಪ್ಪಲ್ ನಾಗರಾಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಮರಣೋತ್ಸವಕ್ಕೆ ಸಿದ್ದಲಿಂಗ ಸ್ವಾಮೀಜಿ ಅವರ ಒಪ್ಪಿಗೆ ಪಡೆಯಲಾಗಿದೆ. ಎಸ್‍ಐಟಿ ಮುಖ್ಯರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿಯಿಂದ ವಿವಿಧ ಮಠಾಧೀಶರನ್ನು 101 ಪೂರ್ಣ ಕುಂಭಗಳೊಂದಿಗೆ ಸ್ವಾಗತಿಸಲಾಗುವುದು ಎಂದು ತಿಳಿಸಿದರು.

ಮುಖಂಡ ರವೀಶ್ ಮಾತನಾಡಿ, ಕಾರ್ಯಕ್ರಮದ ಸಾನ್ನಿಧ್ಯವನ್ನು ಸಿದ್ದಲಿಂಗ ಸ್ವಾಮೀಜಿವಹಿಸುವರು. ಬೆಟ್ಟದಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ಗದ್ದುಗೆ ಮಠದ ಮಹಾಂತ ಸ್ವಾಮೀಜಿ ಅಧ್ಯಕ್ಷತೆವಹಿಸುವರು ಎಂದರು.

ಶಿವಯೋಗದಲ್ಲಿ ಶಿವಕುಮಾರ ಶಿವಯೋಗಿಗಳು ಎಂಬ ವಿಷಯವಾಗಿ ಶರತ್‍ಚಂದ್ರ ಸ್ವಾಮೀಜಿ ವಿಷಯ ಮಂಡಿಸುವರು. ಸಮಾಜಮುಖಿ ಶಿವಕುಮಾರ ಸ್ವಾಮೀಜಿ ಎಂಬ ವಿಷಯವಾಗಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ರಾಷ್ಟ್ರೀಯತೆಯಲ್ಲಿ ಶಿವಕುಮಾರ ಸ್ವಾಮೀಜಿ ಎಂಬ ವಿಷಯವಾಗಿ ರಾಮಕೃಷ್ಣಾಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ ಮಾತನಾಡುವರು ಎಂದರು.

ಜಿಲ್ಲಾ ವೀರಶೈವ ಲಿಂಗಾಯತ ಸೇವಾ ಸಮಿತಿಯ ಗೌರವಾಧ್ಯಕ್ಷ ತರಕಾರಿ ಮಹೇಶ್ ಮಾತನಾಡಿ, ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಎಂ.ಎನ್.ಚನ್ನಬಸಪ್ಪ, ಸಿದ್ಧಗಂಗಾ ವಿದ್ಯಾಸಂಸ್ಥೆ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ, ಎಸ್.ವಿ.ಎಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎಚ್.ಪರಮಶಿವಯ್ಯ, ನಿವೃತ್ತ ಪ್ರಾಧ್ಯಾಪಕ ಎಲ್.ವಿರೂಪಾಕ್ಷಯ್ಯ, ಸಿದ್ದಲಿಂಗಯ್ಯ, ಮಹದೇವಸ್ವಾಮಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಸಿದ್ಧಗಂಗಾ ಆಸ್ಪತ್ರೆಯ ಡಾ.ಪರಮೇಶ್, ಜ.21ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗುತ್ತದೆ ಎಂದರು.

ರುದ್ರೇಶ್, ಮಲ್ಲಿಕಾರ್ಜುನ್, ಮಂಜುನಾಥ್, ತೇಜಸ್ ಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು