ಗುರುವಾರ , ಜೂನ್ 30, 2022
27 °C

​​​​​​​ತುಮಕೂರು: ಎರಡು ಬೈಕ್‌ಗಳ ನಡುವೆ ಅಪಘಾತ, ವ್ಯಕ್ತಿ ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಎರಡು ಬೈಕ್‌ಗಳ ಮಧ್ಯೆ ನಡೆದ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟ ಘಟನೆ ತಾಲ್ಲೂಕಿನ ಊರ್ಡಿಗೆರೆ ಗ್ರಾಮದ ಬಳಿ ಬುಧವಾರ ರಾತ್ರಿ ನಡೆದಿದೆ.

ಮೃತಪಟ್ಟವರನ್ನು ನಜೀರ್ ಅಹ್ಮದ್ (40) ಎಂದು ಗುರುತಿಸಲಾಗಿದೆ. ಊರ್ಡಿಗೆರೆಯಲ್ಲಿ ಬೈಕ್ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ.

ಮಧುಗಿರಿ ಕಡೆಯಿಂದ ಊರ್ಡಿಗೆರೆಗೆ  ಬರುತ್ತಿದ್ದ ಬೈಕ್‌ಗೆ ಬೆಂಗಳೂರಿನಿಂದ ಮಧುಗಿರಿಯ ಕಡೆಗೆ ತೆರಳುತ್ತಿದ್ದ  ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಮತ್ತೊಂದು ಬೈಕ್ ನಲ್ಲಿದ್ದ ಪವನ್ ಮತ್ತು ಪಲ್ಲವಿ ಗಾಯಗೊಂಡಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು