ಗುರುವಾರ , ಫೆಬ್ರವರಿ 20, 2020
23 °C

ಬೈಕ್‌ ಅಪಘಾತ: ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುರುವೇಕೆರೆ: ಕಾಡುಹಂದಿಗೆ ಗುದ್ದಿ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ ತಾಲ್ಲೂಕಿನ ಕಸಬಾ ವ್ಯಾಪ್ತಿಯ ನೀರಗುಂದ ಗ್ರಾಮದ ನಿವಾಸಿ ಶಿವಸ್ವಾಮಿ(55) ಗುರುವಾರ ಮೃತಪಟ್ಟರು.

ಶಿವಸ್ವಾಮಿ ಜ.14ರ ರಾತ್ರಿ ಬೈಕ್‌ ಮೂಲಕ ಕೆ.ಬಿ.ಕ್ರಾಸ್‌ನಿಂದ ಸ್ವಗ್ರಾಮಕ್ಕೆ ತೆರಳುತ್ತಿರುವಾಗ ರಸ್ತೆಗೆ ದಿಢೀರನೆ ನುಗಿದ್ದ ಕಾಡುಹಂದಿಗೆ ಗುದ್ದಿ, ನೆಲಕ್ಕೆ ಬಿದ್ದು ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದರು. ಶಿವಸ್ವಾಮಿಯನ್ನು ದಾರಿಹೋಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸೇರಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಫೆ.5ರಬುಧವಾರ ಕೊನೆಯುಸಿರೆಳೆದಿದ್ದಾರೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)