ಸೋಮವಾರ, ನವೆಂಬರ್ 18, 2019
29 °C

ಸ್ಪರ್ಧಾತ್ಮಕ ಪರೀಕ್ಷೆಗೆ ಮುಕ್ತ ವಿವಿ ತರಬೇತಿ

Published:
Updated:

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಐಎಎಸ್, ಐಪಿಎಸ್, ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ರೀತಿ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ವಿವಿಯ ಕುಲಸಚಿವ ಪ್ರೊ.ಬಿ.ರಮೇಶ್ ತಿಳಿಸಿದ್ದಾರೆ.

ಆಸಕ್ತರು ಸೆ.14ರೊಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತ ಗಂಗೋತ್ರಿ ಆವರಣದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಮಾಹಿತಿಗೆ 0821–2515944 ಸಂಪರ್ಕಿಸಬಹುದು.

 

ಪ್ರತಿಕ್ರಿಯಿಸಿ (+)