ಸೋಮವಾರ, ಮಾರ್ಚ್ 8, 2021
31 °C
₹1.80 ಕೋಟಿ ವೆಚ್ಚದಲ್ಲಿ ನಿರ್ಮಾಣ

ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಡಿಗೇನಹಳ್ಳಿ: ವೈದ್ಯರು ಆಸ್ಪತ್ರೆಗೆ ಬರುವ ರೋಗಿಗಳ ನೋವಿಗೆ ಸ್ಪಂದಿಸಿದಾಗ ಮಾತ್ರ ಜನರ ಮನದಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಹೋಬಳಿಯ ಮುದ್ದೇನಹಳ್ಳಿಯಲ್ಲಿ ₹1.80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

‘ನಾವು ಇಂದು ಯಥೇಚ್ಛವಾಗಿ ಹಣ ಖರ್ಚು ಮಾಡುತ್ತಿದ್ದರೂ ಜನರಿಗೆ ಸರಿಯಾಗಿ ಉಪಯೋಗವಾಗುತ್ತಿಲ್ಲ. ಎಲ್ಲಿ
ವರೆಗೆ ಪ್ರತಿಯೊಬ್ಬ ಮನುಷ್ಯನ ಕಾಲಿಗೆ ಶಕ್ತಿ ತುಂಬಲ್ಲ ಮತ್ತು ಅವನ ಬೇಕು-ಬೇಡಗಳನ್ನ ಈಡೇರಿಸಲು ಸಾಧ್ಯ
ವಾಗುವುದಿಲ್ಲವೊ ಅಲ್ಲಿಯವರೆಗೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ’ ಎಂದರು.

ಶಾಸಕ ಎಂ.ವಿ. ವೀರಭದ್ರಯ್ಯ ಮಾತನಾಡಿ, ಈ ಭಾಗ ಗಡಿಭಾಗವಾಗಿರುವ ಕಾರಣ ಇಲ್ಲಿನ ಜನರಿಗೆ ಆಸ್ಪತ್ರೆಯ ಅವಶ್ಯಕತೆಯಿತ್ತು. ಹಾಗಾಗಿ ಸರ್ಕಾರ ಇಲ್ಲಿಗೆ ನೂತನ ಕಟ್ಟಡಕ್ಕೆ ಮಂಜೂರಾತಿ ನೀಡಿದ ಕಾರಣ ಇಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡವೊಂದು ನಿರ್ಮಾಣವಾದರೇ ಸಾಲದು ಇಲ್ಲಿ ಕೆಲಸ ಮಾಡುವಂತಹ ವೈದ್ಯರು, ನರ್ಸ್ ಹಾಗೂ ಎಲ್ಲ ಸಿಬ್ಬಂದಿಯಿದ್ದು ಈ ಭಾಗದ ಜನರಿಗೆ ಅನುಕೂಲವಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಈ ಭಾಗ ಬರಪೀಡಿತಪ್ರದೇಶವಾಗಿರುವ ಕಾರಣ ಸಚಿವರು ಈ ಭಾಗದ ಕೆರೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು ಎಂದು ಮನವಿ ನೀಡಿದರು.

ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಸಿಇಒ ಗಂಗಾಧರಸ್ವಾಮಿ, ಆರೋಗ್ಯ ಇಲಾಖೆ ನಿರ್ದೇಶಕ ಡಾ. ಓಂಪ್ರಕಾಶ್ ಪಾಟೀಲ್, ಪೊಲೀಸ್ ವರಿಷ್ಠಾಧಿಕಾರಿ ಡಾ. ವಂಶಿಕೃಷ್ಣ, ಡಿಎಚ್‌ಒ ನಾಗೇಂದ್ರಪ್ಪ, ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ತಹಶೀಲ್ದಾರ್ ಡಾ. ಜಿ.ವಿಶ್ವನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾರವಿಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ರಮೇಶ್, ಬೆಸ್ಕಾಂ ಎಒಒ ಮಲ್ಲಿಕಾರ್ಜುನ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾದೇನನಾಯ್ಕ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಂಜುಳಾಆದಿನಾರಾಯಣರೆಡ್ಡಿ, ಚೌಡಪ್ಪ, ಟಿಎಚ್‌ಒ ರಮೇಶ್ ಬಾಬು, ಬೈದ್ಯಾಧಿಕಾರಿ ರಕ್ಷಿತಾ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು