ತುಮಕೂರು: ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಸಾಮಾನ್ಯ ಜನರ ಬೆನ್ನಿನ ಮೇಲೆ ಬರೆ ಎಳೆದಿದೆ ಎಂದು ಗ್ರಾಮಾಂತರ ಶಾಸಕ ಬಿ.ಸುರೇಶ್ಗೌಡ ಟೀಕಿಸಿದ್ದಾರೆ.

‘ಗ್ಯಾರಂಟಿ ಯೋಜನೆ ಜಾರಿಯಿಂದ ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆಯಿಲ್ಲ’ ಎಂದು ಬೊಬ್ಬೆ ಹೊಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಗ ಬೊಕ್ಕಸ ಬರಿದಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಕಳೆದ ವರ್ಷ ಪೆಟ್ರೋಲ್, ಡೀಸೆಲ್, ಮದ್ಯದ ದರ ಏರಿಸಲಾಗಿತ್ತು. ಬಿಪಿಎಲ್ ಕಾರ್ಡ್ಗಳ ಸಂಖ್ಯೆಯನ್ನು ಕಡಿತ ಮಾಡಲು ಹೊರಟಿತ್ತು. ಇದನ್ನೆಲ್ಲ ನೋಡಿದರೆ ಈ ಸರ್ಕಾರಕ್ಕೆ ಬಡವರ ಬಗ್ಗೆ ಕರುಣೆ ಇಲ್ಲ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ನೀಡಿದರೆ ನಿಜವಾದ ಪ್ರಯೋಜನವಾಗುತ್ತದೆ. ಸರ್ಕಾರದ ಮೇಲಿನ ಅನಗತ್ಯ ಹೊರೆ ಕಡಿಮೆಯಾಗುತ್ತದೆ. ಆದರೆ, ಸಿದ್ದರಾಮಯ್ಯ ಹಟಕ್ಕೆ ಬಿದ್ದವರಂತೆ ಗ್ಯಾರಂಟಿ ಯೋಜನೆಗಳನ್ನು ಇಡಿಯಾಗಿ ಸಮರ್ಥಿಸಿಕೊಳ್ಳುತ್ತಿದ್ದು, ಅವುಗಳ ಮರುಪರಿಶೀಲನೆಗೆ ಒಪ್ಪುತ್ತಲೇ ಇಲ್ಲ. ʻಶಕ್ತಿʼ ಯೋಜನೆಯಿಂದ ಹೆಣ್ಣು ಮಕ್ಕಳು ಉಚಿತ ಪ್ರಯಾಣ ಮಾಡುವ ಭಾಗ್ಯ ಗಳಿಸಿದ್ದಾರೆ. ಆದರೆ, ಅದರ ಹೊರೆಯನ್ನು ಈಗ ಪುರುಷರು ಹೊರಬೇಕಾಗಿ ಬಂದಿದೆ. ಕೆಂಪು ಬಸ್ಗಳಲ್ಲಿ ಪರುಷರು ನಿಂತು ಪ್ರಯಾಣಿಸಲೂ ಜಾಗವಿಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

‘ಇದು ಅತ್ಯಂತ ಭ್ರಷ್ಟ ಸರ್ಕಾರ’ ಎಂದು ಉದ್ಯಮಿ ಮೊಹನದಾಸ್ ಪೈ ಈಚೆಗೆ ಇಂಗ್ಲಿಷ್ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿರುವ ಮಾತು ಸತ್ಯವಾಗಿದೆ. ಯಾರು ಏನು ಹೇಳಿದರೇನು ಎನ್ನುವಂತಹ ಧೋರಣೆ ಇದ್ದಂತೆ ಇದೆ. ಸರ್ಕಾರದ ಹುಸಿ ಪ್ರತಿಷ್ಠೆಗೆ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.