ಗುರುವಾರ , ಜುಲೈ 7, 2022
23 °C
ಬೆಸ್ಕಾಂ ಕಚೇರಿವರೆಗೆ ಮೆರವಣಿಗೆ

ವಿದ್ಯುತ್‌ ಖಾಸಗೀಕರಣಕ್ಕೆ ವಿರೋಧ: ಸರ್ಕಾರದ ವಿರುದ್ಧ ರೈತರ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ಸರ್ಕಾರಗಳ ನೀತಿ ಖಂಡಿಸಿ ರಾಜ್ಯ ರೈತ ಸಂಘದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ನಗರದ ಬಿಜಿಎಸ್ ವೃತ್ತದಿಂದ ಕೋತಿತೋಪು ಬಳಿಯ ಬೆಸ್ಕಾಂ ಸೂಪರಿಂಟೆಂಡಿಂಗ್ ಎಂಜಿನಿಯರ್ ಕಚೇರಿಯವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸರ್ಕಾರಗಳ ವಿರುದ್ಧ ಘೋಷಣೆಗಳು ಮೊಳಗಿದವು. ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ರೈತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿ ರುವ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆ ಯಬೇಕು. ರೈತರ ಎಲ್ಲಾ ಉತ್ಪನ್ನಗಳನ್ನು ಬೆಂಬಲ ಬೆಲೆ ಯಲ್ಲಿ ಖರೀದಿಸಬೇಕು. ರೈತರ ಪಂಪ್‌ ಸೆಟ್‌ಗಳಿಗೆ ನಿರಂತರವಾಗಿ ಹತ್ತು ಗಂಟೆ ಕಾಲ ವಿದ್ಯುತ್ ಹರಿಸುವಂತೆ ರೈತರು ಆಗ್ರಹಿಸಿದರು.

ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರಪ್ಪ ಮಾತನಾಡಿ, ‘ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ, ಬಿಕ್ಕೇಗುಡ್ಡ, ಹಾಗಲವಾಡಿ ನೀರಾವರಿ ಯೋಜನೆಗಳ ಕಾಲಮಿತಿ ಮುಗಿದು ಹಲವು ವರ್ಷಗಳಾದರೂ ಅನುಷ್ಠಾನ ಭಾಗ್ಯ ಕಂಡಿಲ್ಲ. ಕೂಡಲೇ ಯೋಜನೆಗಳಿಗೆ ಬೇಕಾದ ಹಣವನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ದೇಶದಲ್ಲಿ ನಿರುದ್ಯೋಗ, ಬಡತನ, ಭ್ರಷ್ಟಾಚಾರ, ಸ್ವಜನಪಕ್ಷಪಾತ, ಕೋಮುವಾದ ತಾಂಡವವಾಡುತ್ತಿದೆ. ನಾಲ್ಕು ಗೋಡೆಗಳ ಮಧ್ಯೆ ಇರಬೇಕಾದ ಧರ್ಮವನ್ನು ಬೀದಿಗೆ ತಂದರು. ಹಿಜಾಬ್, ಹಲಾಲ್ ಹೆಸರಿನಲ್ಲಿ ಯುವಕರನ್ನು ಎತ್ತಿಕಟ್ಟಿ, ಪ್ರತಿಭಟಿಸುವ ಮನಸ್ಥಿತಿಯೇ ಇಲ್ಲದಂತೆ ಮಾಡಲಾಗಿದೆ ಎಂದು ಟೀಕಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ. ಗೋವಿಂದರಾಜು, ‘ವಿದ್ಯುತ್‌ ಕ್ಷೇತ್ರವನ್ನು ಖಾಸಗೀ ಕರಣ ಮಾಡುವುದರಿಂದ ರೈತರಿಗೆ ಹೆಚ್ಚಿನ ನಷ್ಟವಾಗಲಿದೆ. ಖಾಸಗೀಕರಣ ವಾದರೆ ರೈತರ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುತ್ತಾರೆ. ಇದ ರಿಂದ ಉಚಿತವಾಗಿ ವಿದ್ಯುತ್‌ ದೊರೆ ಯುವ ದಿಲ್ಲ. ಬೆಸ್ಕಾಂ ನೌಕರರು ಕೆಲಸ ಕಳೆದುಕೊಳ್ಳಬೇಕಾಗುತ್ತದೆ’ ಎಂದು ಹೇಳಿದರು.

ಸುಟ್ಟ ವಿದ್ಯುತ್‌ ಪರಿವರ್ತಕಗಳನ್ನು ಸರಿಪಡಿಸಲು ರೈತರಿಂದ ಸಾವಿರಾರು ರೂಪಾಯಿ ಪಡೆಯುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ಸೂಕ್ತ ಸಮಯಕ್ಕೆ ಸ್ಪಂದಿಸುತ್ತಿಲ್ಲ. ಜಿಲ್ಲೆಯಲ್ಲಿ ಖಾಲಿಯಿರುವ 1,276 ಲೈನ್‌ಮನ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಮುಖಂಡರಾದ ರವೀಶ್, ಜಿ.ಸಿ. ಶಂಕರಪ್ಪ, ಗೋಪಾಲ್‌, ಕೆ.ಎನ್‌. ವೆಂಕಟೇಗೌಡ, ಸಿ.ಜೆ. ಲೋಕೇಶ್, ಮಹದೇವ್, ಲಿಂಗರಾಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು