ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1.35 ಲಕ್ಷ ಪ್ಲಾಸ್ಟಿಕ್‌ ಬಾಟಲಿಗಳ ಬಳಕೆ: ‘ನಮ್ಮ ಸಂವಿಧಾನ’ ಕಲಾಕೃತಿ ರಚನೆ

Published 5 ಫೆಬ್ರುವರಿ 2024, 16:35 IST
Last Updated 5 ಫೆಬ್ರುವರಿ 2024, 16:35 IST
ಅಕ್ಷರ ಗಾತ್ರ

ತುಮಕೂರು: ಸಂವಿಧಾನ ಜಾಗೃತಿ ಅಭಿಯಾನದ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏಕ ಬಳಕೆಯ ಪ್ಲಾಸ್ಟಿಕ್‌ ಬಾಟಲಿಗಳನ್ನು ಉಪಯೋಗಿಸಿ ‘ನಮ್ಮ ಸಂವಿಧಾನ’ ಎಂಬ ಕನ್ನಡ ಪದದ ಕಲಾಕೃತಿ ರಚಿಸಲಾಗಿದೆ.

ನೂರಾರು ವಿದ್ಯಾರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿ ಪ್ಲಾಸ್ಟಿಕ್‌ ಬಾಟಲಿಗಳನ್ನು ಜೋಡಿಸಿ ವಿಶೇಷ ಆಕೃತಿ ರಚಿಸಿದ್ದಾರೆ.

‘1.35 ಲಕ್ಷ ಪ್ಲಾಸ್ಟಿಕ್‌ ಬಾಟಲಿಗಳನ್ನು ಬಳಸಿ ಕಲಾಕೃತಿ ತಯಾರಿಸಲಾಗಿದೆ. ಮತ್ತೊಂದು ಗಿನ್ನಿಸ್‌ ದಾಖಲೆ ನಿರ್ಮಿಸಲು ಜಿಲ್ಲಾ ಆಡಳಿತ ಮುಂದಾಗಿದೆ. ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕನ್ನಡ ಪದಗಳ ವಿಶೇಷ ಆಕೃತಿ ಜೋಡಿಸುವ ವಿನೂತನ ಪ್ರಯತ್ನ ನಡೆದಿದೆ’ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಜಿ.ಪಂ ಸಿಇಒ ಜಿ.ಪ್ರಭು, ‘ಸಂವಿಧಾನ ಜಾಗೃತಿ ಜಾಥಾವು ಇದುವರೆಗೆ ಜಿಲ್ಲೆಯ 130 ಗ್ರಾಮ ಪಂಚಾಯಿತಿ ಹಾಗೂ 4 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಂಚರಿಸಿದೆ. ಎಲ್ಲ ಕಡೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಜನರು ಹಬ್ಬದ ರೀತಿಯಲ್ಲಿ ಜಾಥಾ ಸ್ವಾಗತಿಸುತ್ತಿದ್ದಾರೆ’ ಎಂದರು.

ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಂವಿಧಾನ ಕಲಾಕೃತಿಯ ಸುತ್ತ ನಿಂತು ಗೌರವ ಸಲ್ಲಿಸಿ, ಸಂವಿಧಾನ ಪೀಠಿಕೆ ಓದಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಬಿಇಒ ಸೂರ್ಯಕಲಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತ್ಯಾಗರಾಜ್‌ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT