ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕ್ಸಿಜನ್ ಬೆಡ್‍ಗಳ ಏರಿಕೆ ಸಾಧ್ಯವಿಲ್ಲ

ಜಿಲ್ಲೆಯಲ್ಲಿ 450 ಆಮ್ಲಜನಕ ಸಹಿತ ಹಾಸಿಗೆ: ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್
Last Updated 1 ಮೇ 2021, 6:38 IST
ಅಕ್ಷರ ಗಾತ್ರ

ತಿಪಟೂರು: ಜಿಲ್ಲೆಯಲ್ಲಿ ಸದ್ಯಕ್ಕೆ 450 ಆಕ್ಸಿಜನ್ ಬೆಡ್‍ಗಳಿದ್ದು (ಆಮ್ಲಜನಕ ಸಹಿತ ಹಾಸಿಗೆ), ಅವುಗಳನ್ನು ಏರಿಕೆ ಮಾಡಲು ಸಾಧ್ಯವಿಲ್ಲ. ಆದರೆ ಸದ್ಯಕ್ಕಿರುವ ಆಮ್ಲಜನಕ ಸಹಿತ ಹಾಸಿಗೆಗಳಿಗೆ ಆಮ್ಲಜನಕವನ್ನು ನಿರಂತರವಾಗಿ ಕೊರತೆಯಾಗದಂತೆ ಪೂರೈಕೆ ಮಾಡಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಿಳಿಸಿದರು.

ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಕೊರೊನಾ ಮೊದಲನೇ ಅಲೆಯ ಸಂದರ್ಭದಲ್ಲಿ ರಾಜ್ಯಸರ್ಕಾರದ ನಿರ್ದೇಶನದಂತೆಯೇ ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿಯೂ ಆಮ್ಲಜನಕ ಸಹಿತ ಇರುವ 50 ಹಾಸಿಗೆಗಳ ಕೇರ್ ಸೆಂಟರ್ ಸಿದ್ಧಪಡಿಸಲಾಗಿತ್ತು. ಅದರಂತೆಯೇ ಇಡೀ ಜಿಲ್ಲೆಯಲ್ಲಿ 450 ಹಾಸಿಗೆಗಳು ಲಭ್ಯವಿದ್ದು, ಅದರಲ್ಲಿ 426 ಹಾಸಿಗೆಗಳು ತುಂಬಿವೆ. 289 ಜನರಿಗೆ ಆಮ್ಲಜನಕದ ಅಗತ್ಯವಿದ್ದು ಬಳಸಿಕೊಳ್ಳುತ್ತಿದ್ದಾರೆ. ಹಣ, ಸಿಬ್ಬಂದಿ ಎಲ್ಲ ಇದ್ದರೂ ಆಮ್ಲಜನಕದ ಕೊರತೆ ಇರುವುದರಿಂದ ಅಗತ್ಯವಿದ್ದರೂ ಹೆಚ್ಚುವರಿ ಹಾಸಿಗೆಗಳನ್ನು ಮಾಡಲು ಸಾಧ್ಯವಾಗುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 11 ಸಾವಿರಕ್ಕೂ ಹೆಚ್ಚಾಗಿದೆ. ತಿಪಟೂರಿನಲ್ಲಿ ಪ್ರಸ್ತುತ 486 ಸೋಂಕಿತರಿದ್ದಾರೆ. ಅದರಲ್ಲಿ ಆಸ್ಪತ್ರೆಯಲ್ಲಿ 53 ಜನ ಆಕ್ಸಿಜನ್ ಸಹಿತ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 36 ಜನ ಆಮ್ಲಜನಕದ ಸಹಾಯವನ್ನು ಪಡೆದುಕೊಂಡಿದ್ದಾರೆ. ಈಗಾಗಲೇ ರಾಜ್ಯಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಆಮ್ಲಜನಕದ ಸುವ್ಯವಸ್ಥಿತವಾಗಿ ಪೂರೈಕೆ ಮಾಡಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಆರ್‌ಟಿಪಿಸಿಆರ್‌ ಪ್ರಯೋಗಾಲಯದಲ್ಲಿ ದಿನವೊಂದಕ್ಕೆ ಸಾವಿರದಿಂದ ಒಂದೂವರೆ ಸಾವಿರ ಪರೀಕ್ಷೆಗಳು ನಡೆಯುತ್ತಿದ್ದು, ಸರ್ಕಾರದ ನಿರ್ದೇಶನದಂತೆ 24 ಗಂಟೆಯ ಒಳಗಾಗಿ ಪರೀಕ್ಷೆಯ ಫಲಿತಾಂಶವನ್ನು ನೀಡಲು ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಈ ಹಿಂದೆ 11 ಸಾವಿರ ಪರೀಕ್ಷೆಗಳ ಫಲಿತಾಂಶ ತಡವಾಗಿದ್ದ ಕಾರಣ ಆರೋಗ್ಯ ನಿರ್ದೇಶಕರ ನಿರ್ದೇಶನದಂತೆ ಬೇರೆ ಬೇರೆ ಜಿಲ್ಲೆಗಳಿಗೆ ಹಾಗೂ ಬೆಂಗಳೂರು ಕೇಂದ್ರಗಳಿಗೆ ಕಳುಹಿಸಿ ಫಲಿತಾಂಶವನ್ನು ಪಡೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಒಂದೇ ದಿನದಲ್ಲಿ ಇಲ್ಲಿಯೇ ಫಲಿತಾಂಶ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ತಾಲ್ಲೂಕಿನಲ್ಲಿ ಶೇ 42ರಷ್ಟು ಜನರು ಲಸಿಕೆ ಪಡೆದಿದ್ದಾರೆ. 3-4 ದಿನಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಲಸಿಕೆ ಪೂರೈಕೆಯ ಬಗ್ಗೆ ಮಾಹಿತಿ ಇದ್ದು, ಎಲ್ಲರಿಗೂ ಸಿಗುವಂತೆ ತ್ವರಿತವಾಗಿ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಶಾಸಕ ಬಿ.ಸಿ.ನಾಗೇಶ್, ಉಪವಿಭಾಗಾಧಿಕಾರಿ ದಿಗ್ವಿಜಯ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಂಶಿಕೃಷ್ಣ, ಉಪ ಅಧೀಕ್ಷಕ ಚಂದನ್ ಕುಮಾರ್.ಎನ್., ತಹಶೀಲ್ದಾರ್ ಆರ್.ಜೆ.ಚಂದ್ರಶೇಖರ್, ಪೌರಾಯುಕ್ತ ಉಮಾಕಾಂತ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪ್ರಹ್ಲಾದ್, ತಾಲ್ಲೂಕು ವೈದ್ಯಾಧಿಕಾರಿ ಡಾ.ರವಿಕುಮಾರ್, ಡಾ.ಶಿವಕುಮಾರ್, ಡಾ.ರಕ್ಷಿತ್ ಗೌಡ, ಡಾ.ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT