ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಬಾರಿ ಬೆಲೆಗೆ ಆಮ್ಲಜನಕ ಮಾರಾಟ

ಪ್ರಕರಣ ದಾಖಲು: ಸಿಲಿಂಡರ್‌ ವಶ
Last Updated 12 ಮೇ 2021, 6:27 IST
ಅಕ್ಷರ ಗಾತ್ರ

ಕುಣಿಗಲ್: ದುಬಾರಿ ಹಣಕ್ಕೆ ಆಮ್ಲಜನಕದ ಸಿಲಿಂಡರ್‌ಗಳನ್ನು ಕ್ರಷರ್‌ಗೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಕುಣಿಗಲ್ ಪೊಲೀಸರು, ಸಂಬಂಧಪಟ್ಟ ಟ್ರೇಡರ್ಸ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ತರಿಕೆರೆ ತಿರುಮಲ ಕ್ರಷರ್ ಬಳಿ ಹನುಮಂತ ಅವರು ದುಬಾರಿ ಬೆಲೆಗೆ ಆಮ್ಲಜನಕ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ರಮೇಶ್ ಮಾರ್ಗದರ್ಶನದಲ್ಲಿ ಸಿಪಿಐ ರಾಜು ಮತ್ತು ಸಿಬ್ಬಂದಿ ದಾಳಿ ನಡೆಸಿ ಎರಡು ಆಮ್ಲಜನಕದ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಕೋವಿಡ್ ಹಿನ್ನಲೆಯಲ್ಲಿ ಆಮ್ಲಜನಕ ಸಿಲಿಂಡರ್‌ಗಳನ್ನು ರೋಗಿಗಳ ಶುಶ್ರೂಷೆಗಾಗಿ ಮಾತ್ರ ಬಳಕೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ, ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಪಟ್ಟಣದ ಎಸ್‌ಎಲ್‌ವಿ ಟ್ರೇಡರ್ ಮಾಲೀಕ ನರಸಿಂಹಮೂರ್ತಿ, ಮತ್ತು ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವಸಂತ್ ಅವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕರಣ ದಾಖಲಿಸಲಾಗಿದೆ ಎಂದು ಸಿಪಿಐ ರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT