ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮೇಶ್ ಜಾರಕಿಹೊಳಿ ಏಕೆ ರಾಜೀನಾಮೆ ಕೊಡ್ತಾರೊ ಗೊತ್ತಿಲ್ಲ: ಜಿ.ಪರಮೇಶ್ವರ

Last Updated 23 ಏಪ್ರಿಲ್ 2019, 13:08 IST
ಅಕ್ಷರ ಗಾತ್ರ

ತುಮಕೂರು: ‘ಶಾಸಕ ರಮೇಶ್ ಜಾರಕಿಹೊಳಿ ಅವರು ಯಾವ ಉದ್ದೇಶಕ್ಕೆ ರಾಜೀನಾಮೆ ನೀಡುತ್ತಾರೋ ಅದು ನನಗೆ ಗೊತ್ತಿಲ್ಲ’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ನುಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವರನ್ನು ಪಕ್ಷವೇ ಸಚಿವರನ್ನಾಗಿ ಮಾಡಿತ್ತು. ನಾನೇ ರಮೇಶ್ ಜೊತೆ ಮಾತನಾಡುತ್ತೇನೆ. ವೈಯಕ್ತಿಕ ಕಾರಣಕ್ಕೆ ಅವರು ರಾಜೀನಾಮೆ ಕೊಡಬಹುದು ಎನಿಸುತ್ತದೆ’ ಎಂದು ಹೇಳಿದರು.

‘ಸತೀಶ್ ಜಾರಕಿಹೊಳಿ ಮತ್ತು ರಮೇಶ್ ನಡುವೆ ಭಿನ್ನಾಭಿಪ್ರಾಯ ಮೊದಲಿನಿಂದಲೂ ಇದೆ. ಸಹೋದರರು ಭಿನ್ನಾಭಿಪ್ರಾಯದ ಬಳಿಕ ಒಗ್ಗೂಡುವುದು ಸಹಜ. ರಮೇಶ್ ಅವರಿಗೆ ಪಕ್ಷದಲ್ಲಿ ಬೇರೆ ಜವಾಬ್ದಾರಿ ಕೊಡಬಹುದು’ ಎಂದರು.

ಈ ರಾಜೀನಾಮೆ ವಿಚಾರದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪಾತ್ರ ಇಲ್ಲ. ಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರ ಬೀಳುತ್ತದೆ ಎಂದು ಸುಮ್ಮನೆ ಹೇಳುತ್ತಾರೆ. ಅವರಲ್ಲಿ ಕೆಲವರು ಸಚಿವರಾಗುವ ಆಸೆ ಇಟ್ಟುಕೊಂಡಿದ್ದಾರೆ. ಆದರೆ ಅದು ಆಸೆಯಾಗಿಯೇ ಉಳಿಯುತ್ತದೆ. ಸರ್ಕಾರ ಸುಭದ್ರವಾಗಿದೆ’ ಎಂದು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT