ಮಂಗಳವಾರ, ಸೆಪ್ಟೆಂಬರ್ 29, 2020
22 °C

ಪರಮೇಶ್ವರ ಜನ್ಮದಿನ; ರಕ್ತದಾನ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ತಾಲ್ಲೂಕಿನ ಪುರವರದಲ್ಲಿ ಶಾಸಕ ಡಾ.ಜಿ.ಪರಮೇಶ್ವರ ಅವರ ಜನ್ಮದಿನದ ಅಂಗವಾಗಿ ಗುರುವಾರ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ಅಭಿಮಾನಿಗಳ ಬಳಗದಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 70ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.

ಕಾಂಗ್ರೆಸ್ ಮುಖಂಡ ಸಂಕಾಪುರದ ದಿಲೀಪ್ ಮಾತನಾಡಿ, ರಕ್ತ ತಯಾರಿಸಲು ಯಾರಿಂದಲೂ ಸಾಧ್ಯವಿಲ್ಲ. ರಕ್ತ ದಾನ ಮಾಡಿದರೆ ರೋಗಿಯ ಜೀವ ಉಳಿಸಿದಂತಾಗುತ್ತದೆ ಎಂದರು.

ಮುಖಂಡ ಅರಳಾಪುರ ಶಿವಕುಮಾರ್ ಮಾತನಾಡಿ, ಕೊರೊನಾ ಸೋಂಕು ಹರಡುತ್ತಿರುವ ಕಾರಣ ರಕ್ತದ ಬೇಡಿಕೆ ಹೆಚ್ಚಾಗಿದ್ದು, ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವ ವನ್ನು ಉಳಿಸಿದಂತಾಗುತ್ತದೆ ಎಂದರು.

ಆಸ್ಪತ್ರೆಯ ಮಹಮದ್ ಷೇಕ್, ಸಿಬ್ಬಂದಿ ಮಹಾಲಕ್ಷ್ಮಿ, ಮಂಜುನಾಥ್, ಯುವ ಮುಖಂಡರಾದ ಕುಮಾರಸ್ವಾಮಿ, ದರ್ಶನ್, ಅಜಯ್ ಕುಮಾರ್, ಅನಂತ, ಚಂದ್ರು, ರಂಗಧಾಮಯ್ಯ, ಸಂಜಯ್, ಸುಧಾಕರ, ಶಂಕರರೆಡ್ಡಿ, ಅಭಿಷೇಕ್, ಹನುಮಂತರಾಯ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.