ಗುರುವಾರ , ಮೇ 19, 2022
21 °C
ಪ್ರುಡೆನ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ನಡೆದ ‘ಸ್ಫೂರ್ತಿಯ ಚಿಲುಮೆ’ ಕಾರ್ಯಕ್ರಮದಲ್ಲಿ ಹೇಳಿಕೆ

ಗುರಿ ಮುಟ್ಟುವ ದಾರಿ ಬಹುಮುಖ್ಯ: ಸ್ವಾಮಿ ವೀರೇಶಾನಂದ ಸರಸ್ವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ‘ಜೀವನದಲ್ಲಿ ಗುರಿ ಮುಖ್ಯ. ಗುರಿ ಮುಟ್ಟುವ ದಾರಿಯೂ ಮುಖ್ಯ. ಶ್ರಮವಿಲ್ಲದೆ ಫಲವಿಲ್ಲ. ಶ್ರಮಕ್ಕೆ ಪರ್ಯಾಯ ಮಾರ್ಗವಿಲ್ಲ’ ಎಂದು ರಾಮಕೃಷ್ಣ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ ನುಡಿದರು.

ತಾಲ್ಲೂಕಿನ ಹಿರೇಹಳ್ಳಿ ಸಮೀ‍ಪದ ಪ್ರುಡೆನ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ನಡೆದ ‘ಸ್ಫೂರ್ತಿಯ ಚಿಲುಮೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಜೀವನ ಸಿದ್ಧತೆ ಬೇರೆ. ಪರೀಕ್ಷಾ ಸಿದ್ಧತೆಯೇ ಬೇರೆ. ವಿದ್ಯಾರ್ಥಿಗಳು ನೊಣಗಳಾಗಬಾರದು. ಜೇನು ನೊಣಗಳಾಗಬೇಕು. ಈ ನಿಟ್ಟಿನಲ್ಲಿ ಏಕಾಗ್ರತೆಯನ್ನು ಬೆಳೆಸಿಕೊಂಡು ಸಾಧನೆಯತ್ತ ಹೆಜ್ಜೆ ಇಡಬೇಕು. ಸಾಧಿಸುವುದು ಇನ್ನು ಇದೇ ಎಂಬ  ಚಿಂತನೆ ನಿಮ್ಮನ್ನು ಕ್ರಿಯಾಶೀಲರನ್ನಾಗಿಸುತ್ತದೆ. ಸಾಧನೆಗೆ ಶ್ರಮ, ಆತ್ಮವಿಶ್ವಾಸ, ಭರವಸೆ, ನಂಬಿಕೆಯೇ ಮೂಲ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಿಕ್ಷಕರಲ್ಲಿ ಸಕಾರಾತ್ಮಕ ಆಲೋಚನೆ ಇರಬೇಕು. ಮಕ್ಕಳೊಂದಿಗೆ ಭಾವನಾತ್ಮಕ ಸಂಬಂಧಗಳನ್ನು ಹೊಂದಿರಬೇಕು. ಕಲಿಯುವ ಆಸಕ್ತಿ ಇರುವವರೇ ಕಲಿಸಲು ಯೋಗ್ಯರಾಗಿರುತ್ತಾರೆ. ಮಕ್ಕಳಿಗೆ ಶಿಕ್ಷಕರೇ ತಂದೆ, ತಾಯಿ, ದೇವರು ಸರ್ವವೂ ಆಗಿರುತ್ತಾರೆ. ಶಿಕ್ಷಕರು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಯಾವುದು ಲಭ್ಯವಾಗಿಲ್ಲ ಎಂದೆನಿಸುತ್ತದೆಯೊ ಅದನ್ನು ಮಕ್ಕಳಿಗೆ ನೀಡಬೇಕು’ ಎಂದು ಸಲಹೆ ನೀಡಿದರು.

‘ವಿದ್ಯಾರ್ಥಿಗಳಲ್ಲಿನ ಉತ್ತಮ ಗುಣಗಳನ್ನು ಪ್ರೋತ್ಸಾಹಿಸಬೇಕು. ಕೆಟ್ಟ ಗುಣಗಳನ್ನು ತಿದ್ದುವ ಕಾರ್ಯದಲ್ಲಿ ಶಿಕ್ಷಕರು ತೊಡಗಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಸಿಬಿಎಸ್‌ಸಿ ಹತ್ತನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸ್ವಾಮೀಜಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ.ಜಿ.ಎಸ್.ರೇಣುಕಪ್ಪ, ‘ಕೆ.ಎನ್. ಬಿಂದುಶ್ರೀ ಅತಿ ಹೆಚ್ಚು ಅಂಕ (483) ಪಡೆದಿದ್ದಾರೆ. 52 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ’ ಎಂದರು.

ಕಾರ್ಯದರ್ಶಿ ಪಿ.ರುದ್ರೇಶ್‌ ಕುಮಾರ್, ನಿರ್ದೇಶಕರಾದ ರೂಪಾ ರುದ್ರೇಶ್, ಉಪಪ್ರಾಂಶುಪಾಲೆ ಸುಷ್ಮಾ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು. ಪ್ರಾಂಶುಪಾಲರಾದ ವಿಜಯ್‌ಕುಮಾರ್ ವಿ.ಕುಲಕರ್ಣಿ ಸ್ವಾಗತಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು