ಪಾವಗಡ: ಅಂಬೇಡ್ಕರ್ ಅವರ ತತ್ವ ಮತ್ತು ಸಿದ್ಧಾಂತಗಳನ್ನು ಕೇವಲ ಆಚರಣೆಗಳಿಗೆ ಸೀಮಿತಗೊಳಿಸದೆ, ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನೆ, ಮಾದಾರ ಮಹಾಸಭಾ ಒಕ್ಕೂಟಗಳ ಆಶ್ರಯದಲ್ಲಿ ಮಂಗಳವಾರ ನಡೆದ ಬಾಬು ಜಗಜೀವನ್ ರಾಂ ಮತ್ತು ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.

ಅಂಬೇಡ್ಕರ್, ಜಗಜೀವನ್ ರಾಂ ಎರಡು ಕಣ್ಣುಗಳಿದ್ದಂತೆ. ಇಂದು ಇಡೀ ವಿಶ್ವವೇ ಅವರನ್ನು ಕೊಂಡಾಡುವ ದಿನ. ಸರ್ಕಾರಗಳ ಧೋರಣೆ, ಒಳಮೀಸಲಾತಿಯಂತಹ ವಿವಾದಾತ್ಮಕ ನಿರ್ಧಾರ, ಸಾಮಾಜಿಕ ತಾರತಮ್ಯಗಳಿಂದ ದಲಿತ ಸಮುದಾಯಗಳ ಸರ್ವತೋಮುಖ ಪ್ರಗತಿ ಕುಂಠಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾ ಅಟ್ರಾಸಿಟಿ ಸಮಿತಿ ಸದಸ್ಯ ಡಿ.ಜೆ.ಎಸ್. ನಾರಾಯಣಪ್ಪ, ಅಂಬೇಡ್ಕರ್ ಅವರ ತತ್ವ ಸಿದ್ಧಾಂತ ಮತ್ತು ಇತಿಹಾಸವನ್ನು ಮೈಗೂಡಿಸಿಕೊಳ್ಳುವ ಜವಾಬ್ದಾರಿ ಎಲ್ಲರದ್ದು ಎಂದರು.

ಡಿಎಸ್ಎಸ್ ಜಿಲ್ಲಾ ಸಂಚಾಲಕ ಪಿ.ಎ. ನರಸಿಂಹಪ್ಪ, ಮದ್ಲೇಟಪ್ಪ, ವಕೀಲ ಟಿ.ಎನ್. ಪೇಟೆ ರಮೇಶ್, ವಿಜಯ್ ಕುಮಾರ್, ಎಸ್. ಹನುಮಂತರಾಯಪ್ಪ, ನಾಗೇಂದ್ರಕುಮಾರ್, ಸಿ.ಕೆ. ತಿಪ್ಪೇಸ್ವಾಮಿ, ಪೆದ್ದಣ್ಣ, ನರಸಿಂಹಪ್ಪ, ಕೃಷ್ಣಮೂರ್ತಿ, ಮಾದಾರ ಮಹಾಸಭಾ ನರಸಿಂಹಪ್ಪ, ಕೆ.ಪಿ. ಲಿಂಗಣ್ಣ, ಬಿ. ಹೊಸಹಳ್ಳಿ ಮಲ್ಲಿ, ಎಂ.ಕೆ. ನಾರಾಯಣಪ್ಪ, ಬಸವಲಿಂಗಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-17-1537158912

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.