ಪಾವಗಡ: ‘ಸಂವಿಧಾನದಿಂದ ಸಾಕಷ್ಟು ಬದಲಾವಣೆಯಾಗಿದೆ. ಹೀಗಾಗಿ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು’ ಎಂದು ಮಾಜಿ ಶಾಸಕ ಕೆ.ಎಂ ತಿಮ್ಮರಾಯಪ್ಪ ತಿಳಿಸಿದರು.

ತಾಲ್ಲೂಕಿನ ಗುಜ್ಜಾರ ಹಳ್ಳಿಯಲ್ಲಿ ಭಾನುವಾರ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.

‘ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನತೆ ತಂದುಕೊಟ್ಟ ಅಂಬೇಡ್ಕರ್ ಅವರ ಕೊಡುಗೆ ವರ್ಣಿಸಲು ಸಾಧ್ಯವಾಗುವುದಿಲ್ಲ. ದೇಶದ ಸಂವಿಧಾನ ವಿಶ್ವದಲ್ಲಿಯೇ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಇಂತಹ ಮಹನೀಯರ ಜೀವನವನ್ನು ಪ್ರೇರಣೆಯಾಗಿ ಸ್ವೀಕರಿಸಬೇಕು’ ಎಂದು ತಿಳಿಸಿದರು.

ಸಾಹಿತಿ ವಡ್ಡಗೆರೆ ನಾಗರಾಜಯ್ಯ, ‘ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಉತ್ತಮ, ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಶಿಸ್ತಿನಿಂದ ಮಕ್ಕಳನ್ನು ಬೆಳೆಸಬೇಕು. ಅಂಬೇಡ್ಕರ್, ಬಾಬುಜಗಜೀವನರಾಂ ಸೇರಿದಂತೆ ಮಹನೀಯರ ತತ್ವ, ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.

ವಕೀಲ ಹರಿರಾಮ್, ‘ಅಂಬೇಡ್ಕರ್ ಅವರು ತಿಳಿಸಿದಂತೆ ಶಿಕ್ಷಣವೇ ಶಕ್ತಿ. ಶಿಕ್ಷಣ, ಕಾನೂನು ಎರಡು ಕಣ್ಣುಗಳಿದ್ದಂತೆ’ ಎಂದು ತಿಳಿಸಿದರು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ಸರ್ಕಾರಿ ವಕೀಲ ಸಣ್ಣೀರಪ್ಪ, ವಕೀಲ ಟಿ.ಎನ್ ಪೇಟೆ ರಮೇಶ್, ಸಿ ಕೆ ತಿಪ್ಪೇಸ್ವಾಮಿ, ಮಂಗಳವಾಡ ಮಂಜುನಾಥ್, ಕೆ.ಪಿ ಲಿಂಗಣ್ಣ, ಮಾದಾರ ಮಹಾಸಭಾ ಅಧ್ಯಕ್ಷ ನರಸಿಂಹಪ್ಪ, ಬಿ.ಹೊಸಹಳ್ಳಿ ಮಲ್ಲಿಕಾರ್ಜುನ, ಆಪ್ ಬಂಡೆ ಗೋಪಾಲ್, ಹನುಮಂತರಾಯ, ವೆಂಕಟರವಣಪ್ಪ, ಶಿಕ್ಷಕ ಸಣ್ಣೀರಪ್ಪ, ಬಿ.ಪಿ ಪೆದ್ದಣ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪಾರ್ವತಮ್ಮ ನಾಗರಾಜು, ಈರಣ್ಣ, ನಾಗರಾಜು, ಬಿ ತಿಮ್ಮಪ್ಪ, ಜಿ.ಟಿ ಶ್ರೀನಿವಾಸಮೂರ್ತಿ, ಇ.ಶಿವಕುಮಾರ, ಶಿಕ್ಷಕ ಶಿವಕುಮಾರ್, ಚಂದ್ರಪ್ಪ, ಬಸವರಾಜು, ದೇವರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-17-1200764211

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.