ಪಾವಗಡ: ತಾಲ್ಲೂಕಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿ ಜೆ.ಡಿಎಸ್ ತಾಲ್ಲೂಕು ಘಟಕದ ಪದಾಧಿಕಾರಿಗಳು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿ ಮುಂಭಾಗ ಕೆಲಕಾಲ ಪ್ರತಿಭಟನೆ ನಡೆಸಿದರು. ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಮಾತನಾಡಿ, ತಾಲ್ಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಕೆರೆ- ಕುಂಟೆ ಬತ್ತಿ ಹೋಗಿರುವುದರಿಂದ ಜಾನುವಾರುಗಳಿಗೂ ನೀರಿಲ್ಲದೆ ಸಮಸ್ಯೆಯಾಗಿದೆ. ಮಳೆ ಇಲ್ಲದೆ ಅಂತರ್ಜಲ ಮಟ್ಟ ಕುಸಿದು ಬರದ ಛಾಯೆ ಆವರಿಸಿದೆ ಎಂದು ಆರೋಪಿಸಿದರು.

ಕಚೇರಿಗಳಲ್ಲಿ ಸರಿಯಾಗಿ ಕೆಲಸ ಕಾರ್ಯ ನಡೆಯುತ್ತಿಲ್ಲ. ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ತಾಲ್ಲೂಕಿನಲ್ಲಿ ಸಹಸ್ರಾರು ಬಿಪಿಎಲ್ ಕಾರ್ಡ್ಗಳು ರದ್ದಾಗಿದೆ. ಜನತೆ ಜೀವನೋಪಾಯಕ್ಕಾಗಿ ಬೇರೆಡೆ ವಲಸೆ ಹೋಗಿ ಕೂಲಿ ಕೆಲಸ ಮಾಡುವ ಸ್ಥಿತಿ ಇದೆ. ಜೆಜೆಎಂ ಕಾಮಗಾರಿ ವಿಳಂಬದಿಂದ ಜನರಿಗೆ ತೀವ್ರ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿದರು.

ಕೂಡಲೇ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು. ತಾಲ್ಲೂಕಿನ ಸಮಸ್ಯೆಗಳನ್ನು ಬಗೆಹರಿಸಬೇಕು. ರದ್ದು ಮಾಡಿರುವ ಬಿಪಿಎಲ್ ಪಡಿತರ ಚೀಟಿ ಮತ್ತೆ ಅರ್ಹರಿಗೆ ಕೊಡಿಸಬೇಕು. ತಾಲ್ಲೂಕಿನಲ್ಲಿ ರಸ್ತೆಗಳು ಹದಗೆಟ್ಟಿದ್ದು ಅವುಗಳನ್ನು ದುರಸ್ತಿ ಮಾಡಿಸಬೇಕು. ಪಟ್ಟಣದ 23 ವಾರ್ಡ್ಗಳಲ್ಲಿ ವಿದ್ಯುತ್ ದೀಪಗಳ ಆಳವಡಿಕೆ ಮಾಡಿ ಪ್ರಮುಖ ರಸ್ತೆಗಳಲ್ಲಿ ಹೈಮಾಸ್ಟ್ ದೀಪಗಳನ್ನು ಅಳವಡಿಸಬೇಕು. ನಾಗಲಮಡಿಕೆ ಉತ್ತರ ಪಿನಾಕಿನಿ ಚೆಕ್ಡ್ಯಾಂಗೆ ಆಂಧ್ರಪ್ರದೇಶದ ಅಂದ್ರಿನಿವಾ ಯೋಜನೆ ನೀರನ್ನು ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಜೆಡಿಎಸ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಆರ್.ಸಿ. ಆಂಜಿನಪ್ಪ, ಎನ್.ಎ. ಈರಣ್ಣ, ಜಿ.ಬಲರಾಂ, ಸೊಗಡು ವೆಂಕಟೇಶ್, ತಿಮ್ಮಾರೆಡ್ಡಿ, ಬಲರಾಮರೆಡ್ಡಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯುನುಸ್, ಗಗನ್, ಗಡ್ಡಂ ತಿಮ್ಮರಾಜು, ಆಪ್ಬಂಡೆ ಗೋಪಾಲ್, ಸಾರವಾಟಪುರ ಗೋವಿಂದರಾಜು, ರಾಜಶೇಖರ್, ಗುಟ್ಟಹಳ್ಳಿ ಮಣಿ, ಮನು ಮಹೇಶ್, ಕಾವಲಗೆರೆ ರಾಮಾಂಜಿ, ಕೋಟಗುಡ್ಡ ಅಂಜಿನಪ್ಪ, ಸಾದಿಕ್, ಸತೀಶ್, ಗಫೂರ್ ಸಾಬ್, ಖಯೂಂ, ಮೃತ್ಯುಜ, ಸತ್ಯನಾರಾಯಣ, ನಾಗೇಶ್, ಭರತ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-17-849321960

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.