ಪಾವಗಡ: ತಾಲ್ಲೂಕಿನ ಕರೇಕ್ಯಾತನಹಳ್ಳಿಯಲ್ಲಿ ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಸಂವಿಧಾನದ ಪೀಠಿಕೆ ಓದುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಶಾಸಕ ಎಚ್.ವಿ.ವೆಂಕಟೇಶ್, ಸಂವಿಧಾನವು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಎಲ್ಲ ಜಾತಿ, ಧರ್ಮಗಳಿಗೂ ಸಮಾನ ಅವಕಾಶ ನೀಡಿದೆ. ಮೀಸಲಾತಿ ಇರುವುದರಿಂದ ಕೆಳವರ್ಗದ ಬಹುತೇಕ ವಿದ್ಯಾರ್ಥಿಗಳು ಎಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯುವಂತಾಯಿತು ಎಂದರು.

ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಮೀಸಲಾತಿ ಸದ್ಭಳಕೆ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು. ಶಿಕ್ಷಣದಿಂದ ಉನ್ನತಿ ಸಾಧ್ಯ ಎಂದರು.

ತುಮಕೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟ ಶಂಕರ್, ದಲಿತರಿಗೆ ವಿಮೋಚನೆ ದಾರಿ ತೋರಿಸಿದವರೆ ಅಂಬೇಡ್ಕರ್. ಇಂದಿಗೂ ದಲಿತರಿಗೆ ರಾಜಕೀಯವಾಗಿ ಬೆಳೆಯಲು ಸಾಧ್ಯವಾಗಿಲ್ಲ. ರಾಜಕೀಯವು ಕೆಲವು ವರ್ಗಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದರು.

ಎಸ್ಎಫ್ಐ ಮಾಜಿ ಜಿಲ್ಲಾಧ್ಯಕ್ಷ ಈ.ಶಿವಣ್ಣ ಮಾತನಾಡಿ, ದೇಶದಲ್ಲಿ ದಲಿತರ ಮೇಲೆ ವ್ಯಾಪಕ ದಬ್ಬಾಳಿಕೆ, ದೌರ್ಜನ್ಯ ನಡೆದಿವೆ. ದಲಿತರ ಅಭಿವೃದ್ಧಿಗಾಗಿ ಇದುವರೆಗೂ ವಿಶೇಷ ಸಂಸತ್ ಅಧಿವೇಶನ ನಡೆದಿಲ್ಲ ಎಂದು ದೂರಿದರು.

ಕೆಂಚರಾಯ, ನಾಗರಾಜ, ಕಾರ್ಯದರ್ಶಿ ಸಿ. ಶಿವಣ್ಣ, ಅಧ್ಯಕ್ಷ ಕೆ.ಎಸ್.ಶಿವಕುಮಾರ್, ವಕೀಲ ಕೆ.ಒ.ಶಿವಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸ್ವಾರಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನಿತ, ಸಿ.ಕೆ.ತಿಪ್ಪೇಸ್ವಾಮಿ, ವೆಂಕಟರವಣಪ್ಪ, ಟಿ. ಹನುಮಂತರಾಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-17-909853377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.