ಪಾವಗಡ: ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಿದವರಿಗೆ ಕೂಡಲೆ ಜಮೀನು ಮಂಜೂರು ಮಾಡಿ ಆದೇಶ ಪತ್ರ ನೀಡಬೇಕು ಎಂದು ಒತ್ತಾಯಿಸ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ವ್ಯಾಪ್ತಿಯ 4 ಹೋಬಳಿಗಳ ರೈತರು ಜಮೀನು ಸಮತಟ್ಟು ಮಾಡಿಕೊಂಡು, ಹಲ ದಶಕಗಳಿಂದ ಉಳುಮೆ ಮಾಡಿ ಜೀವನ ಮಾಡುತ್ತಿದ್ದಾರೆ. ಸರ್ಕಾರ ತಾವು ಅನುಭವದಲ್ಲಿರುವ ಜಮೀನಿಗೆ ಬಗರ್ ಹುಕುಂ ಅಡಿ ಮಂಜೂರಾತಿ ಪತ್ರ ನೀಡುತ್ತದೆ ಎಂಬ ಆಸೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕಂದಾಯ ಇಲಾಖೆ ವಿಳಂಬ ಧೋರಣೆ ಅನುಸರಿಸುತ್ತಿರುವುದು ರೈತರಿಗೆ ಅಸಮಾಧಾನ ಉಂಟು ಮಾಡುತ್ತಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ ಹೇಳಿದರು.

ತಾಲ್ಲೂಕಿನ ಕಣಿವೇನಹಳ್ಳಿ ಗ್ರಾಮದ ಸರ್ವೆ ನಂ. 6ರಲ್ಲಿ ಸುಮಾರು 50 ವರ್ಷಗಳಿಂದ ಬಂಜರು ಭೂಮಿಯನ್ನು ಹದ ಮಾಡಿಕೊಂಡು ವ್ಯವಸಾಯ ಮಾಡಿ ಜೀವನ ನಡೆಸಲಾಗುತ್ತಿದೆ. ರೈತರು ಫಾರಂ 50, 53, 57ರಲ್ಲಿ ಬಗರ್ ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದರು.

ಬಗರ್ ಹುಕುಂ ಅರ್ಜಿಗಳನ್ನು ವಜಾ ಮಾಡಬಾರದು. ಈಗಾಗಲೆ ಸಲ್ಲಿಸಲಾದ ಅರ್ಜಿಗಳನ್ನು ತ್ವರಿತವಾಗಿ ವಿಲೇಮಾಡಿ ಮಂಜೂರಾತಿ ಪತ್ರ ನೀಡಬೇಕು ಎಂದು ಒತ್ತಾಯಿಸಿದರು.

ಬೇಡಿಕೆ ಈಡೇರಿಸುವಂತೆ ಗ್ರೇಡ್ 2 ತಹಶೀಲ್ದಾರ್ ಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು. ರೈತರ ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಶಿವು, ನಾರಾಯಣನಾಯ್ಕ, ಮೇಘಾನಾಯ್ಕ, ನರಸಿಂಹಪ್ಪ, ದೇವನಾಥಪ್ಪ, ಮರ್ಜನ್, ಸದಾಶಿವಪ್ಪ, ಗುಡಿಪಲ್ಲಪ್ಪ, ಚಿತ್ತಯ್ಯ, ರಾಜಣ್ಣ, ದುರ್ಗಪ್ಪ, ಹನುಮಂತರಾಯಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-811300526

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.