ಗುರುವಾರ , ಮೇ 19, 2022
20 °C

ಯುವಕನಿಗೆ ಕಪಾಳ ಮೋಕ್ಷ ಮಾಡಿದ ಪಾವಗಡ ಶಾಸಕ ವೆಂಕಟರಮಣಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಪಾವಗಡ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಶಾಸಕ ವೆಂಕಟರಮಣಪ್ಪ ಅವರು ಯುವಕನೊಬ್ಬನ ಕಪಾಳಕ್ಕೆ ಹೊಡೆದಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಶಾಸಕರ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ತಾಲ್ಲೂಕಿನ ರಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿ ಗ್ರಾಮದ ಯುವಕ ನರೇಂದ್ರ ಅವರು ತಮ್ಮ ಗ್ರಾಮಕ್ಕೆ ಸಮರ್ಪಕ ರಸ್ತೆ ಸೌಕರ್ಯ, ಬಸ್ ಸಂಚಾರ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಯಾರೊಬ್ಬರೂ ಗ್ರಾಮಕ್ಕೆ ಸೌಕರ್ಯ ಕಲ್ಪಿಸಲು ಗಮನ ಹರಿಸುತ್ತಿಲ್ಲ ಎಂದು ಬಗರ್ ಹುಕುಂ ಸಭೆ ಮುಗಿಸಿಕೊಂಡು ಹೊರ ಬರುತ್ತಿದ್ದ ಶಾಸಕರನ್ನು ಪ್ರಶ್ನಿಸಿದ್ದಾರೆ.

ಪ್ರಶ್ನಿಸುವ ಭರದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿದ್ದರಿಂದ ಕೋಪಗೊಂಡ ಶಾಸರು, ಕಪಾಳಕ್ಕೆ ಹೊಡೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸಾರ್ವಜನಿಕವಾಗಿ ಶಾಸಕರು ಸಂಯಮದಿಂದ ವರ್ತಿಸಬೇಕು. ಒಂದು ವೇಳೆ ಯುವಕ ತಪ್ಪು ಮಾಡಿದ್ದರೂ ಬುದ್ಧಿ ಹೇಳಬೇಕಿತ್ತು. ಸಾರ್ವಜನಿಕವಾಗಿ ಹೊಡೆಯಬಾರದಿತ್ತು ಎಂಬ ಟೀಕೆಗಳು ಜಾಲತಾಣದಲ್ಲಿ ವ್ಯಕ್ತವಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು