ಪಾವಗಡ: ತಾಲ್ಲೂಕಿನ ಬ್ಯಾಡನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿ. ವಡ್ಡರಹಟ್ಟಿ ಗ್ರಾಮಸ್ಥರು ಗುರುವಾರ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಖಾಲಿ ಬಿಂದಿಗೆಗಳೊಂದಿಗೆ ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಜಾನುವಾರುಗಳಿಗೆ ಸಹ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಹಲವು ಬಾರಿ ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೀರಿನ ಸಮಸ್ಯೆ ಬಗೆಹರಿಸಬೇಕು. ಬೇಡಿಕೆ ಈಡೇರಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಗ್ರಾಮಸ್ಥರು ಶುದ್ಧ ಕುಡಿಯುವ ನೀರಿಗಾಗಿ ನಿತ್ಯ ದೂರದ ಬ್ಯಾಡನೂರು ಮತ್ತು ಸುತ್ತಲಿನ ಪ್ರದೇಶಗಳಿಗೆ ಬಂದು ಕುಡಿಯುವ ನೀರು ತೆಗೆದುಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ ಎಂದು ಮಹಿಳೆಯರು ಆರೋಪಿಸಿದರು.

ಗ್ರಾಮಸ್ಥರಾದ ಗೋವಿಂದರಾಜು, ಬೋಜಿರಾಜು, ನಾಗರಾಜು, ರಮೇಶ್, ನಾರಾಯಣಪ್ಪ, ಶಿವಮ್ಮ, ನರಸಮ್ಮ, ಅನಸೂಯಮ್ಮ, ಮಾರುತಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-17-1861822877

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.