ಪಾವಗಡ: ತಾಲ್ಲೂಕಿನ ಪಿ. ವಡ್ಡರಹಟ್ಟಿ ಗ್ರಾಮಕ್ಕೆ ಶುಕ್ರವಾರ ತಾಲ್ಲೂಕು ಕಾರ್ಯನಿರ್ವಹಣಾ ಅಧಿಕಾರಿ ಮಧುಸೂದನ್ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿದರು.

ಪಿ. ವಡ್ಡರಹಟ್ಟಿ ಗ್ರಾಮಸ್ಥರು ಗುರುವಾರ ಕುಡಿಯುವ ನೀರನ್ನು ಪೂರೈಸುವಂತೆ ಒತ್ತಾಯಿಸಿ ಬ್ಯಾಡನೂರು ಗ್ರಾಮ ಪಂಚಾಯಿತಿ ಮುಂದೆ ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಶುಕ್ರವಾರ ವರದಿ ಪ್ರಕಟವಾಗಿತ್ತು.

ತಾಲ್ಲೂಕು ಕಾರ್ಯನಿರ್ವಾಹಣಾ ಅಧಿಕಾರಿ ಮಧುಸೂದನ್ ಮಾತನಾಡಿ, ಪಿ. ವಡ್ಡರಹಟ್ಟಿ ಗ್ರಾಮಕ್ಕೆ ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ, ನೀರಿನ ಸಮಸ್ಯೆ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದರು.

ಪೈಪ್ಲೈನ್ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ನಲ್ಲಿಗಳನ್ನು ತೆರವುಗೊಳಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. ಓವರ್ ಹೆಡ್ ಟ್ಯಾಂಕ್ಗೆ ಸಂಪರ್ಕ ಕಲ್ಪಿಸುವ ಮುಖ್ಯ ಪೈಪ್ಲೈನ್ಗೆ ಯಾವುದೇ ಸಂಪರ್ಕ ನೀಡಬಾರದು ಎಂದು ತಿಳಿಸಿದರು.

ಮುಖ್ಯ ಪೈಪ್ಲೈನ್ನಿಂದ ನಲ್ಲಿಗಳಿಗೆ ಸಂಪರ್ಕ ತೆಗೆದುಕೊಂಡಲ್ಲಿ ಓವರ್ ಹೆಡ್ ಟ್ಯಾಂಕ್ಗೆ ನೀರು ಹೋಗುವುದಿಲ್ಲ. ಇದರಿಂದ ಸಮಸ್ಯೆಯಾಗಿದೆ. ಕುಡಿಯುವ ನೀರಿಗಾಗಿ ಜೆಜೆಎಂ ಸಂಪರ್ಕ ಕೊಡಿಸಲಾಗುವುದು. ಕುಡಿಯುವ ನೀರಿನ ಶುದ್ಧೀಕರಣ ಘಟಕ ದುರಸ್ತಿ ಮಾಡಿಸಿ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು.

ಬ್ಯಾಡನೂರು ಗ್ರಾಮ ಪಂಚಾಯಿತಿ ಪಿಡಿಒ ರಂಗಸ್ವಾಮಿ ಮಾತನಾಡಿ, ಪಿ. ವಡ್ಡರಹಟ್ಟಿ ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸುವ ಮುಖ್ಯ ಪೈಪ್ಲೈನ್ನಿಂದ ಸಂಪರ್ಕ ಪಡೆದುಕೊಂಡಿದ್ದರು. ತಕ್ಷಣ ಅನಧಿಕೃತವಾಗಿ ನೀರು ಪಡೆಯುತ್ತಿರುವ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಸದ್ಯ ಸಮಸ್ಯೆ ಬಗೆಹರಿಸಲಾಗಿದೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-17-993049076

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.