ಪಾವಗಡ: ತಾಲ್ಲೂಕಿನಲ್ಲಿ ಉತ್ತಮ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದರೂ ಅನಗತ್ಯವಾಗಿ ಇಲ್ಲ ಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸುಜಿತ್ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಜೆಡಿಎಸ್ ನಡೆಸಿದ ಪ್ರತಿಭಟನೆಯಲ್ಲಿ ಕೆಲ ಮುಖಂಡರು ಶಾಸಕ ಎಚ್.ವಿ.ವೆಂಕಟೇಶ್ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ.

ತಾಲ್ಲೂಕಿನಲ್ಲಿ ನೂರಾರು ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮೂರು ವರ್ಷಗಳಿಂದ ತಾಲ್ಲೂಕಿನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತರಲಾಗಿದೆ. ‘ಕಾಂಗ್ರೆಸ್ ಕಾರ್ಯಕರ್ತರು ಗುಂಡಾವರ್ತನೆ ಮಾಡುತ್ತಿದ್ದಾರೆ’ ಎಂಬ ಜೆಡಿಎಸ್ ಮುಖಂಡರ ಆರೋಪ ಖಂಡನೀಯ ಎಂದು ತಿಳಿಸಿದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಾಂಜಿನಪ್ಪ ಮಾತನಾಡಿ, ಮೂರು ವರ್ಷಗಳಿಂದ ಜೆಡಿಎಸ್ ಮುಖಂಡರು ಮೌನವಾಗಿದ್ದು, ಇದೀಗ ಚುನಾವಣೆ ದೃಷ್ಟಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿದರು.

ಮುಕಂಡ ಓಂಕಾರ ನಾಯಕ, ನಗರ ಘಟಕದ ಅಧ್ಯಕ್ಷ ನವೀನ್, ಸಿ.ಕೆ.ಪುರ ವಿಎಸ್ಎಸ್ಎನ್ ಸದಸ್ಯ ಚಿತ್ತಗಾನಹಳ್ಳಿ ಚಂದ್ರು ಮಾತನಾಡಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಮೇಶ್, ಹನುಮೇಶ್ ದಾಸ್, ಪಿ.ಎಲ್ ಮಣಿ, ಪಳವಳ್ಳಿ ಶಿವಣ್ಣ, ಸುರೇಶ್, ರಂಜಿತ್ ಕುಮಾರ್, ಮೂರ್ತಿ, ಹರೀಶ್, ಹರಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-17-103290282

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.