ಪಾವಗಡ: ಸಹಕಾರ ಕ್ಷೇತ್ರದಲ್ಲಿ ಬ್ಯಾಂಕ್ ಅಭಿವೃದ್ಧಿ ಹೊಂದಲು ಠೇವಣಿ, ಷೇರುಗಳು ಜೊತೆಗೆ ಉತ್ತಮ ಆಡಳಿತ ಮಂಡಳಿಯೂ ಅತ್ಯಗತ್ಯ ಎಂದು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಬಿ.ಎಚ್. ಕೃಷ್ಣಾರೆಡ್ಡಿ ತಿಳಿಸಿದರು.

ತಾಲ್ಲೂಕಿನ ತಿರುಮಣಿಯಲ್ಲಿ ಬುಧವಾರ ಶ್ರೀನಿಧಿ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕಠಿಣ ನಿಯಮಗಳು ಇರುವುದರಿಂದ ಸಾಮಾನ್ಯ ಜನರಿಗೆ ಸಾಲ ಸೌಲಭ್ಯ ಪಡೆಯುವುದು ಕಷ್ಟವಾಗುತ್ತದೆ. ಆದರೆ ಸಹಕಾರಿ ಬ್ಯಾಂಕ್ಗಳು ಸಡಿಲ ನಿಯಮಗಳ ಮೂಲಕ ಜನರಿಗೆ ಸಾಲ ಸೌಲಭ್ಯ ಒದಗಿಸುತ್ತಿವೆ ಎಂದರು.

ಅಧ್ಯಕ್ಷ ಸದಾಶಿವರೆಡ್ಡಿ ಮಾತನಾಡಿ, ಬ್ಯಾಂಕ್ ಸುಮಾರು ಹನ್ನೊಂದು ಸಾವಿರ ಸದಸ್ಯರೊಂದಿಗೆ ₹26 ಕೋಟಿ ಷೇರು ಬಂಡವಾಳ ಹೊಂದಿದೆ. ಬ್ಯಾಂಕ್ನ ₹814 ಕೋಟಿ ವಹಿವಾಟು ಹೊಂದಿದ್ದು, 2024-25ನೇ ಸಾಲಿನಲ್ಲಿ ₹8.7 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದರು.

ಕೆನರಾ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ ಕೆ. ವೆಂಕಟರಾಮಯ್ಯ, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ರಾಘವನ್, ಮಾಜಿ ಮಂಡಲ್ ಪ್ರಧಾನ ವಿ.ಸಿ. ಚೆನ್ನಕೇಶವರೆಡ್ಡಿ, ಶಕ್ತಿ ಸ್ಥಳ ರೈತರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಆರ್.ಪಿ. ಸಾಂಬಸದಾಶಿವರೆಡ್ಡಿ, ಉಪಾಧ್ಯಕ್ಷ ರಾಮಾಂಜನೇಯಲು, ಬ್ಯಾಂಕ್ನ ಎಂಡಿ ಪ್ರವೀಣ್ ಕುಮಾರ್, ಬಾಬುರೆಡ್ಡಿ, ನಿರ್ದೇಶಕ ಕೆ.ನರಸಿಂಹ, ಡಿ. ಪರಮೇಶ್ ನಾಯ್ಕ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-17-570579172

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.