ಪಾವಗಡ: ತಾಲ್ಲೂಕಿಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ ಮಾಡಿ, ಕುಡಿಯುವ ನೀರಿನ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ರೈತರು ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಬೇಸಿಗೆಯ ಹಿನ್ನೆಲೆ ಕೆರೆ ಕಾಲುವೆ ಬತ್ತಿ ಹೋಗಿವೆ. ಜನ, ಜಾನುವಾರುಗಳಿಗೆ ಕುಡಿಯುಲೂ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. 15 ದಿನಗಳಿಂದ ತುಂಗಭದ್ರಾ ಕುಡಿಯುವ ನೀರೂ ಸಹ ಸ್ಥಗಿತಗೊಂಡಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ ಆರೋಪಿಸಿದರು.

ತಾಲ್ಲೂಕಿನ 34 ಪಂಚಾಯಿತಿಗಳಲ್ಲಿ ಕೊರೆಸಿರುವ ಕೊಳವೆಬಾವಿ ಬತ್ತಿ ಹೋಗಿವೆ. ಸಾವಿರಾರು ಅಡಿ ಆಳ ಕೊರೆದರೂ ನೀರು ಸಿಗದ ಸ್ಥಿತಿ ಇದೆ. ಶೀಘ್ರ ನೀರಾವರಿ ಯೋಜನೆ ಅನುಷ್ಠಾನ ಮಾಡುವತ್ತ ಅಧಿಕಾರಿಗಳು, ಜನಪ್ರತಿನಿಧಿಗಳು ಒತ್ತು ನೀಡಬೇಕು ಎಂದು ಆಗ್ರಹಿಸಿದರು.

ಒಂದು ಟಿಎಂಸಿ ನೀರು ಸರಬರಾಜು ಮಾಡದಿದ್ದಲ್ಲಿ ರಾಜ್ಯ ರೈತ ಸಂಘದ ಹಾಗೂ ಪ್ರಗತಿಪರ ಸಂಘಟನೆಗಳು ನಿರಂತರ ಧರಣಿ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಗ್ರಾಮಗಳಲ್ಲಿ ನೀರುಗಂಟಿಗಳು ಸರಿಯಾದ ಸಮಯಕ್ಕೆ ನೀರು ಬಿಡುತ್ತಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಶಿವು ಆರೋಪಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ, ಮೂರ್ತಿ, ಚಿತ್ತಯ್ಯ, ಗುಡಿ ಪಲ್ಲಪ್ಪ, ರಾಮಾಂಜಿ, ಸುರೇಶ್, ನಾಗೇಂದ್ರಪ್ಪ, ಲಲಿತಮ್ಮ, ಆಂಜನೇಯ, ದುರ್ಗಪ್ಪ, ಸಂಜೀವಪ್ಪ, ನಡಿ ಪನ್ನ, ಹನುಮಂತರಾಯ, ನಾಗೇಂದ್ರ, ಸದಾಶಿವಪ್ಪ, ಬಸವರಾಜು, ನಾಗರಾಜ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-17-1274756349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.