ಪಾವಗಡ: ತಾಲ್ಲೂಕಿನ ಸಿ.ಕೆ ಪುರದಲ್ಲಿ ಚನ್ನಕೇಶವ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಬೆಳಗಿನ ಜಾವದಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರಥೋತ್ಸವದ ಪ್ರಯುಕ್ತ ಚಿತ್ರಗೋಪುರ ಉತ್ಸವ, ಕಲ್ಯಾಣೋತ್ಸವ, ಗರುಡೋತ್ಸವ ನೆರವೇರಿತು.

ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ಮೂಲಕ ರಥದ ಬಳಿಗೆ ಕರೆತಂದು, ರಥದ ಸುತ್ತ ಪ್ರದಕ್ಷಿಣೆ ಹಾಕಿದ ನಂತರ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಹೂವಿನ ಹಾರ, ಬಾವುಟಗಳಿಂದ ಅಲಂಕರಿಸಿದ್ದ ರಥದ ಚಕ್ರಗಳಿಗೆ ಗೋಪಾಲ್ ರಾವ್, ಸಿ.ಎನ್ ಆನಂದ್ ರಾವ್ ಚಾಲನೆ ನೀಡಿದರು.

ಸಾವಿರಾರು ಭಕ್ತರು ರಥ ಎಳೆದು ಸಂಭ್ರಮಿಸಿದರು. ಸಂಜೆ ಭಕ್ತರ ಸಮ್ಮುಖದಲ್ಲಿ ಗಜೇಂದ್ರ ಮೋಕ್ಷ, ಗಜವಾಹನೋತ್ಸವ ನಡೆಯಿತು.

ರಥೋತ್ಸವದಲ್ಲಿ ಸಿ ಕೆ ಪುರ, ದೇವರಹಟ್ಟಿ, ಚನ್ನಸಾಗರದಹಟ್ಟಿ, ಉದ್ದಂಡಪ್ಪನಪಾಳ್ಯ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-17-510214018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.