ಪಾವಗಡ ತಾಲ್ಲೂಕು ಪಂಚಾಯಿತಿ ಕಚೇರಿ ಬಳಿ ಪಿಡಿಒ ಮೇಲೆ ಹಲ್ಲೆ

ಗುರುವಾರ , ಏಪ್ರಿಲ್ 25, 2019
21 °C

ಪಾವಗಡ ತಾಲ್ಲೂಕು ಪಂಚಾಯಿತಿ ಕಚೇರಿ ಬಳಿ ಪಿಡಿಒ ಮೇಲೆ ಹಲ್ಲೆ

Published:
Updated:

ಪಾವಗಡ: ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಬಳಿ ಸೋಮವಾರ ರಾಪ್ಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೆ ವ್ಯಕ್ತಿಯೊಬ್ಬರು ಸಂಗಡಿಗರೊಂದಿಗೆ ಹಲ್ಲೆ ನಡೆಸಿದ್ದಾರೆ.

ರಾಪ್ಟೆ ಪಂಚಾಯಿತಿಯಲ್ಲಿ ಈ ಹಿಂದೆ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜಶೇಖರ್ ಎಂಬುವವರು ತಮ್ಮನ್ನು ಕೆಲಸದಿಂದ ತೆಗೆದು ಹಾಕಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪಿಡಿಒ ಸಂತೋಷ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

‘ತಿಮ್ಮಮ್ಮನಹಳ್ಳಿ ಗ್ರಾಮದ ರಾಜಶೇಖರ್ ವರ್ಷದ ಹಿಂದೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ದುರ್ವರ್ತನೆಯ ಕಾರಣ ಸದಸ್ಯರು, ಅಧ್ಯಕ್ಷರು ಅವರನ್ನು ಕೆಲಸದಿಂದ ತೆಗೆದು ಹಾಕುವಂತೆ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ನೋಟಿಸ್ ಜಾರಿ ಮಾಡಲಾಯಿತು. ಬೇರೊಬ್ಬರನ್ನು ಕೆಲಸಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿತ್ತು. ಇದರಿಂದ ಆಕ್ರೋಶಗೊಂಡ ರಾಜಶೇಖರ್‌ ಏಕಾಏಕಿ ಅವರ ತಂದೆಯೊಡನೆ ಹಲ್ಲೆ ನಡೆಸಿದ್ದಾರೆ’ ಎಂದು ಸಂತೋಷ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಜೀವ ಬೆದರಿಕೆ ಹಾಕಿದ್ದರು. ಹಲ್ಲೆ ನಡೆಸಲು ಮುಂದಾಗಿದ್ದರು ಎಂದು ಅವರು ತಿಳಿಸಿದ್ಧಾರೆ.

ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಕಾರ್ಯದರ್ಶಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಘಟನೆಯನ್ನು ಖಂಡಿಸಿದ್ದಾರೆ. ಹಲ್ಲೆ ನಡೆಸಿರುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !