ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ಪಿಡಿಒ ಎಸಿಬಿ ಬಲೆಗೆ

Last Updated 12 ಜೂನ್ 2021, 2:30 IST
ಅಕ್ಷರ ಗಾತ್ರ

ಕೊರಟಗೆರೆ: ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅನುದಾನವನ್ನು ದುರುಪಯೋಗ ಮಾಡಿರುವುದರ ಬಗ್ಗೆ ಸಿಇಒ ಅವರಿಗೆ ತಮ್ಮ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಲಂಚದ ನೀಡುವಾಗ ಪಿಡಿಒ ಮಂಜಮ್ಮ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಜಟ್ಟಿ ಅಗ್ರಹಾರ ಗ್ರಾಮದ ಸಾಮಾಜಿಕ ಕಾರ್ಯಕರ್ತ ನಾಗರಾಜು ಅವರು ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅನುದಾನ ದುರುಪಯೋಗವಾಗಿರುವ ಬಗ್ಗೆ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದರು.

ದೂರಿನನ್ವಯ ಸಿಇಒ ಅವರು ತನಿಖೆಗೂ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ದೂರನ್ನು ವಾಪಸ್ ಪಡೆಯಲು ಪಿಡಿಒ ಮಂಜಮ್ಮ ಅವರು ಗ್ರಾಮ ಪಂಚಾಯಿತಿ ಸದಸ್ಯ ಪ್ರಭಾಕರ ಅವರ ಮೂಲಕ ₹1000 ನೀಡುವುದಾಗಿ ನಾಗರಾಜು ಅವರಿಗೆ ಆಮಿಷ ವೊಡ್ಡಿದ್ದರು. ಅದರಂತೆ ಶುಕ್ರವಾರ ಸಂಜೆ ಗ್ರಾಮ ಪಂಚಾಯಿತಿ ಸದಸ್ಯರ ಮೂಲಕ ಹಣ ನೀಡುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಆರೋಪಿಗಳಾದ ಗ್ರಾಮಪಂಚಾಯಿತಿ ಸದಸ್ಯ ಪ್ರಭಾಕರ್ ಹಾಗೂ ಪಿಡಿಒ ಮಂಜಮ್ಮ ಅವರನ್ನು ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT