ತುಮಕೂರು: ಕರ್ತವ್ಯ ಲೋಪದ ಆರೋಪದ ಮೇಲೆ ಪಾವಗಡ ತಾಲ್ಲೂಕು ತಿರುಮಣಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆರ್.ನವೀನ್ ಅವರನ್ನು ಸೇವೆಯಿಂದ ಅಮಾನತುಗೊಳಿ ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ಆದೇಶಿಸಿದ್ದಾರೆ.
ನರೇಗಾ ಯೋಜನೆಯಡಿ ನಿಗದಿತ ಗುರಿಗೆ ತಕ್ಕಂತೆ ಮಾನವ ದಿನಗಳ ಸೃಜನೆಯಲ್ಲಿ ಹಿನ್ನಡೆ, ಯೋಜನೆಯ ಪರಿಣಾಮಕಾರಿ ಅನುಷ್ಠಾನದಲ್ಲಿ ವಿಫಲವಾಗಿರುವುದು, 2021–22 ಮತ್ತು 2022–23ನೇ ಸಾಲಿನಲ್ಲಿ ಒಟ್ಟು 266 ಕಾಮಗಾರಿಗಳ ಪೈಕಿ 199 ಕಾಮಗಾರಿಗಳನ್ನು ಪೂರ್ಣಗೊಳಿಸಿಲ್ಲ. 2023–24ನೇ ಸಾಲಿನಲ್ಲಿ ನರೇಗಾದಡಿ ಯಾವುದೇ ಕಾಮಗಾರಿ ಕೈಗೊಳ್ಳದೆ ಶೂನ್ಯ ಪ್ರಗತಿ ಸಾಧಿಸಿ, ಕರ್ತವ್ಯ ಲೋಪವೆಸಗಿದ್ದಾರೆ. ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ವೇತನ ಪಾವತಿ, ತೆರಿಗೆ ವಸೂಲಿಯಲ್ಲೂ ವಿಫಲರಾಗಿದ್ದಾರೆ.
ಜುಲೈ 4ರಂದು ಪಾವಗಡ ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಗೆ ಮೇಲಧಿಕಾರಿಗಳ ಅನುಮತಿ ಪಡೆಯದೆ ಗೈರು ಹಾಜರಾಗಿ ಕರ್ತವ್ಯ ಲೋಪವೆಸಗಿದ್ದಾರೆ. ಈ ಎಲ್ಲ ಆರೋಪಗಳ ಕುರಿತು ಇಲಾಖೆ ವಿಚಾರಣೆ ಬಾಕಿ ಇರಿಸಿ, ತಕ್ಷಣದಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.